Header Ads
Breaking News

ಮಾಣಿಯಲ್ಲಿ ಸಿಎಎ, ಎನ್ ಆರ್ ಸಿ, ಎನ್‍ಪಿಆರ್ ಕಾಯ್ದೆ ವಿರೋಧಿಸಿ ಪ್ರತಿಭಟನಾ ಸಮಾವೇಶ

ಸಂವಿಧಾನ ಸಂರಕ್ಷಣಾ ಸಮಿತಿ ಮಾಣಿ ಇದರ ವತಿಯಿಂದ ಸಿಎಎ, ಎನ್‍ಆರ್‍ಸಿ, ಎನ್‍ಪಿಆರ್ ಕಾಯ್ದೆ ವಿರೋಧಿಸಿ ಮಾಣಿಯ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.

ಹಿರಿಯ ಪತ್ರಕರ್ತ ಶಶಿಧರ್ ಭಟ್ ಮಾತನಾಡಿ ಹಿಂದೂ ಮುಸ್ಲಿಮರ ಸೌಹಾರ್ದದಿಂದ ಭಾರತ ದೇಶವನ್ನು ಉಳಿಸಬಹುದೇ ಹೊರೆತು ಗೋಡ್ಸೆ ವಾದಿಗಳ ಸಿದ್ಧಾಂತದಿಂದ ಅಲ್ಲ. ಗಾಂಧಿಯನ್ನು ಕೊಂದವರು ದೇಶ ಮತ್ತು ದೇಶದ ಸಂವಿಧಾನವನ್ನು ನಾಶ ಮಾಡಲು ಹೊರಟ್ಟಿದ್ದು ಅದರ ವಿರುದ್ಧ ನಾವೇಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುವುದು ಅನಿರ್ವಾಯವಾಗಿದೆ ಎಂದು ಹೇಳಿದರು.

ಕೊಡಗು ಜಿಲ್ಲೆಯ ವಕೀಲ ಅಮೀನ್ ಮೊಹ್ಸಿನ್, ಪ್ರಗತಿಪರ ಹೋರಾಟಗಾರ್ತಿ ನೇಮಿಚಂದ್ರ, ಮಾಜಿ ಸಚಿವ ಬಿ.ರಮಾನಾಥ ರೈ, ಜೆಡಿಎಸ್ ಮುಖಂಡ ಎಂ.ಬಿ.ಸದಾಶಿವ ಸುಳ್ಯ, ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಭಾಸ್ಕರ್ ಪ್ರಸಾದ್, ಮಾಜಿ ಪೊಲೀಸ್ ಅಧಿಕಾರಿ ಜಿ.ಎ.ಬಾವ ಮಾತನಾಡಿದರು. ಸಾಮಾಜಿಕ ಹೋರಾಟಗಾರ ಹನೀಫ್ ಖಾನ್ ಕೋಡಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್.ಮುಹಮ್ಮದ್, ಎಸ್ಕೆಎಸ್ಸೆಸ್ಸೆಫ್ ನಾಯಕ ಅಝೀಝ್ ದಾರಿಮಿ ಚೊಕ್ಕಬೆಟ್ಟು ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *