Header Ads
Breaking News

ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ  ಪ್ರತಿಷ್ಠಾ ವರ್ಧಂತ್ಯುತ್ಸವ

ವಿಟ್ಲ: ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮಹಾಲಕ್ಷ್ಮೀ, ವಿಠೋಬ ರುಕ್ಮಯಿ, ನಾಗದೇವರ ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಿತು.

ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಪೂರ್ವಜರ ಆಚಾರ, ವಿಚಾರ, ಸಂಪ್ರದಾಯಗಳನ್ನು ಮುಂದುವರಿಸಬೇಕು. ದೇವರು ಒಲಿದರೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ. ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಪ್ರತಿಷ್ಠೆ ನೆರವೇರಿ 25 ವರ್ಷಗಳನ್ನು ಪೂರೈಸಲಾಗುತ್ತಿದ್ದು, ಸಂಭ್ರಮದಿಂದ ಆಚರಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಅನಂತಪ್ರಸಾದ ಆಸ್ರಣ್ಣ ಕಟೀಲು ದೇಗುಲದ ಅರ್ಚಕ ಮಾತನಾಡಿ ಧರ್ಮ ಸಂಸ್ಥಾಪನೆಗೆ ಭಗವಂತನ ಆವಿರ್ಭಾವವಾಗುತ್ತದೆ. ಮಾಣಿಲದಲ್ಲಿ ಶ್ರೀ ಮಹಾಲಕ್ಷ್ಮೀಯನ್ನು ಪ್ರತಿಷ್ಠಾಪಿಸಿ, ಆರಾಧಿಸಿದ ಶ್ರೀಗಳಿಗೆ ಇಲ್ಲಿ ದೇವಿಯ ಅನುಗ್ರಹವಾಗಿದೆ ಎಂದರು.

ಕಟೀಲು ದೇಗುಲದ ಅರ್ಚಕ ಕಮಲಾದೇವಿಪ್ರಸಾದ ಆಸ್ರಣ್ಣ ಆಶೀರ್ವಚನ ನೀಡಿದರು. ಚಂದ್ರಹಾಸ ಆಳ್ವ ಚೆಲ್ಲಡ್ಕ, ಮಾಣಿಲ ಗ್ರಾ. ಪಂ. ಉಪಾಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು, ಟ್ರಸ್ಟಿ ಪುರುಷೋತ್ತಮ ಚೇಂಡ್ಲಾ, ಟ್ರಸ್ಟಿ ತಾರಾನಾಥ ಕೊಟ್ಟಾರಿ, ಟ್ರಸ್ಟಿ ಮಚ್ಚೇಂದ್ರ ಸಾಲ್ಯಾನ್, ಟ್ರಸ್ಟಿ ಚಂದ್ರಶೇಖರ, ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ವನಿತಾ ವಿ.ಶೆಟ್ಟಿ ಸುಣ್ಣಂಬಳ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *