Header Ads
Header Ads
Header Ads
Breaking News

ಮಾತೃಪೂರ್ಣ ಯೋಜನೆ ಅನುಷ್ಠಾನ ಅಸಾಧ್ಯವಲ್ಲ: ಪುತ್ತೂರಿನಲ್ಲಿ ಶಾಸಕಿ ಶಕುಂತಳಾ ಶೆಟ್ಟಿ

ಪುತ್ತೂರು: ಗರ್ಭಿಣಿ, ಬಾಣಂತಿಯರು ಮತ್ತು ಮಕ್ಕಳಲ್ಲಿ ಉಂಟಾಗುತ್ತಿರುವ ಅಪೌಷ್ಠಿಕತೆಯನ್ನು ತಡೆಯಲು ಸರ್ಕಾರವು ಮಾತೃಪೂರ್ಣ ಯೋಜನೆಯನ್ನು ಜಾರಿಗೊಳಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು ಅಸಾಧ್ಯವಲ್ಲ ಎಂದು ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ಪುತ್ತೂರು ನಗರದ ಬನ್ನೂರು ಅಂಗನವಾಡಿ ಕೇಂದ್ರದಲ್ಲಿ ತಾಲೂಕು ಮಟ್ಟದ ಮಾತೃಪೂರ್ಣ ಯೋಜನೆಯನ್ನು ಉದ್ಘಾಟಿಸಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿದರು. ಹೆಣ್ಣು ಮಕ್ಕಳ ಸುರಕ್ಷತೆಯ ದೃಷ್ಟಿಯಲ್ಲಿ ಇಂತಹ ನಂಬಿಕೆಗಳು ಬೆಳೆದು ಬಂದಿದೆ. ಇದರಿಂದಾಗಿ ಯೋಜನೆಯ ಅನುಷ್ಠಾನ ಕಷ್ಟಕರವಾಗಿದೆ ಅದರೆ ಅಸಾಧ್ಯವಲ್ಲ ಫಲಾನುಭವಿಗಳ ಮನವೊಲಿಸುವ ಕೆಲಸ ನಡೆದಲ್ಲಿ ಯೋಜನೆಯ ಯಶಸ್ವಿಯಾಗಲಿದೆ ಎಂದರು.
ಅಪೌಷ್ಠಿಕತೆಯಿಂ ಬಳಲುತ್ತಿರುವ ಎಲ್ಲಾ ಮಕ್ಕಳೂ ಸದೃಡರಾಗಿ, ಬುದ್ದಿವಂತರಾಗಿ ಬೆಳೆಯಬೇಕು ಎಂದು ಸರ್ಕಾರದ ಇಚ್ಚೆಯಾಗಿದೆ. ಜಿಲ್ಲೆಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ನಾನೀಗಲೇ ಸರ್ಕಾರದ ಗಮನಕ್ಕೆ ತಂದಿದ್ದೇನೆ. ಮುಂದೆ ಇಲ್ಲಿ ಯೋಜನೆಯಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ ಎಂದ ಅವರು ಎಲ್ಲರಿಗೂ ಪೌಷ್ಠಿಕ ಆಹಾರ ಸಿಗುವಲ್ಲಿ ಕಾರ್ಯಕರ್ತರು ಸಹಕಾರ ನೀಡಬೇಕು ಎಂದು ಹೇಳಿದರು.
ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಟಿ ಹೆಗಡೆ ,ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ನಗರಸಭಾ ಸದಸ್ಯರಾದ ಜಯಲಕ್ಷ್ಮೀ, ರಾಮಣ್ಣ ಗೌಡ ಅಲಂಗ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಜೀರ್ ಅಹ್ಮದ್, ಅಂಗನವಾಡಿ ಮೇಲ್ವಿಚಾರಕಿ ಜಲಜಾಕ್ಷಿ, ಕಾರ್ಯಕರ್ತೆ ರೋಹಿಣಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಅನೀಶ್ ಪುತ್ತೂರು

Related posts

Leave a Reply