Header Ads
Header Ads
Breaking News

ಮಾದಕ ವ್ಯಸನ ವಿರೋಧಿ ಜಾಗೃತಿ-ಉಡುಪಿಯಲ್ಲಿ ಸೈಕ್ಲಥಾನ್ ಯಶಸ್ವಿ

ಮಾಧಕ ವ್ಯಸನ ವಿರೋಧಿ ಮಾಸಾಚರಣೆಯ ಅಂಗವಾಗಿ ಇಂದು ಸೈಕ್ಲಥಾನ್ ಉಡುಪಿಯಲ್ಲಿ ನಡೆಯಿತು. ಹಿರಿಯ ಪೊಲೀಸ್ ಅಧಿಕಾರಿಗಳು ಸೈಕಲ್ ತುಳಿದು ಗಮನ ಸೆಳೆದರು.

ಉಡುಪಿ ಜಿಲ್ಲಾ ಪೊಲೀಸ್, ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪ್ರೆಸ್ ಕ್ಲಬ್ ಆಶ್ರಯದಲ್ಲಿ ಮಾದಕ ವ್ಯಸನ ವಿರೋಧಿ ಮಾಸಾಚರಣೆ ಅಂಗವಾಗಿ ಜನಜಾಗೃತಿಯ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು ಇದರ ಅಂಗವಾಗಿ ಇಂದು ಸೈಕ್ಲಥಾನ್ ನಡೆಯಿತು. ಬಡಗಬೆಟ್ಟು ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಸಹಕಾರದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಎಸ್ಪಿ ಲಕ್ಷ್ಮಣ್ ನಿಂಬರಗಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ಉಡುಪಿ ಸೈಕ್ಲಿಂಗ್ ಕ್ಲಬ್, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್, ಬಡಗಬೆಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಹಾಗೂ ಪೊಲೀಸರು ಸೇರಿದಂತೆ ಮುನ್ನೂರಕ್ಕೂ ಅಧಿಕ ಮಂದಿ ಈ ಸೈಕ್ಲಥಾನ್ ನಲ್ಲಿ ಭಾಗವಹಿಸಿದರು. ಎಸ್ಪಿ ಲಕ್ಷಣ್ ನಿಂಬರಗಿ, ಎ ಎಸ್ಪಿ ಕುಮಾರಚಂದ್ರ, ಡಿವೈ ಎಸ್ಪಿ ಕುಮಾರ ಸ್ವಾಮಿ, ಬಡಗಬೇಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಸೈಕಲ್ ತುಳಿಯುವುದರ ಮೂಲಕ ಗಮನಸೆಳೆದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಎಸ್ಪಿ ಲಕ್ಷ್ಮಣ್ ನಿಂಬರ್ಗಿ ದೈಹಿಕ ಆರೋಗ್ಯ ಪ್ರತಿಯೊಬ್ಬರಿಗೂ ಮುಖ್ಯವಾಗಿದೆ. ಒತ್ತಡದ ನಡುವಿನ ಜೀವನದಲ್ಲಿ ದೈಹಿಕ ಆರೋಗ್ಯಕ್ಕಾಗಿ ಇಂತಹ ಸೈಕಲ್ ಜಾಥಾ ಅವಶ್ಯಕವಾಗಿದೆ ಎಂದರು. ಎ ಎಸ್ಪಿ ಕುಮಾರ ಚಂದ್ರಬಡಗಬೆಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಜಯಕರಶೆಟ್ಟಿ ಇಂದ್ರಾಳಿ, ಉದ್ಯಮಿ ಪುರುಷೋತ್ತಮ್ ಶೆಟ್ಟಿ, ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಸರಳೇಬೆಟ್ಟು, ಪ್ರೆಸ್ ಕ್ಲಬ್ ಸಂಚಾಲಕ ನಾಗರಾಜ್ ರಾವ್ ವೇದಿಕೆಯಲ್ಲಿದ್ದರು.
ವರದಿ:ಪಲ್ಲವಿ ಸಂತೋಷ್

Related posts

Leave a Reply