Header Ads
Header Ads
Breaking News

ಮಾಧ್ಯಮ ಕಾರ್ಯಗಾರದ ಉದ್ಘಾಟನೆ : ರವೀಂದ್ರ ಕಲಾ ಭವನದಲ್ಲಿ ನಡೆಯುತ್ತಿರುವ ಕಾರ್ಯಕ್ರಮ

ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಾಧ್ಯಮ ಕಾರ್ಯಾಗಾರವು ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಹಾಗೂ ವಿಶ್ವವಿದ್ಯಾಲಯ ಕಾಲೇಜು ಸಹಭಾಗಿತ್ವದಲ್ಲಿ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಬಿ.ನಾರಾಯಣ ವಹಿಸಿದ್ದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ಧರಾಜು ಕಾರ್ಯಾಗಾರವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜ್ ಎಚ್., ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಎ. ಎಂ.ಖಾನ್, ವಿಶ್ವವಿದ್ಯಾಲಯ ಕಾಲೇಜಿನ ಪ್ರಾಂಶುಪಾಲ ಡಾ. ಉದಯಕುಮಾರ್, ಮಂಗಳೂರು ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ನವೀನ್ ಚಂದ್ರ ಡಿ.ಸುವರ್ಣ, ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಹರೀಶ್ ಬಂಟ್ವಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಸಂವಿಧಾನದತ್ತ ಹಕ್ಕುಗಳ ರಕ್ಷಣೆಯಲ್ಲಿ ಮಾಧ್ಯಮದ ಪಾತ್ರದ ಕುರಿತು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹಾಗೂ ಸಂವಿಧಾನ ತಜ್ಞ ಕಾಂತರಾಜ್ ಹೆಚ್, ಅಭಿವೃದ್ಧಿ ಪತ್ರಿಕೋದ್ಯಮ ಎದುರಿಸುತ್ತಿರುವ ಸವಾಲುಗಳು ಎಂಬ ವಿಷಯದಲ್ಲಿ ಹಿರಿಯ ಪತ್ರಕರ್ತ ಗಂಗಾಧರ್ ಹಿರೇಗುತ್ತಿ, ಮಾಧ್ಯಮ ರಂಗ ಆಕರ್ಷಣೆ, ಭ್ರಮೆ ಮತ್ತು ಉದ್ಯೋಗವಕಾಶ ಎಂಬ ವಿಷಯದಲ್ಲಿ ಮೂಡಬಿದಿರೆ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಮೌಲ್ಯ ಜೀವನ್ ರಾಂ ಅವರು ವಿಚಾರ ಮಂಡನೆ ಮಾಡಲಿದ್ದಾರೆ.

Related posts

Leave a Reply