Header Ads
Breaking News

ಮಾರ್ಚ್ 26ರಂದು ‘ಇಂಗ್ಲೀಷ್’ ತುಳು ಮೂವಿ ರಿಲೀಸ್

ಇಂಗ್ಲೀಷ್ ಎಂಕ್ಲೆಗ್ ಬರ್ಪುಜಿ ಬ್ರೋ… ತುಳು ಚಿತ್ರರಂಗದ ಬಹುನಿರೀಕ್ಷೆಯ ಗಿಲ್ಬಿಸ್ಟಿಕ್ ಕಾಮಿಡಿ ಚಿತ್ರ… ಮಂಗಳೂರು ಅಕ್ಮೆ ಮೂವೀಸ್ ಇಂಟರ್ನ್ಯಾಷನಲ್ ಲಾಂಛನದಲ್ಲಿ ನಿರ್ಮಾಣವಾಗಿರೋ ದುಬೈಯ ಖ್ಯಾತ ಉದ್ಯಮಿ, ಕನ್ನಡ ಸಿನಿಮಾ ನಿರ್ಮಾಪಕರಾದ ಹರೀಶ್ ಶೇರಿಗಾರ್ ಮತ್ತು ಶರ್ಮಿಳಾ ಶೇರಿಗಾರ ನಿರ್ಮಿಸಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ ಈ ಚಿತ್ರ ಇದೇ ಬರುವ ಮಾರ್ಚ್ 26ರಂದು ಬಿಡುಗಡೆಯಾಗಲಿದೆ.

ಇಂಗ್ಲೀಷ್ ಎಂಕ್ಲೆಗ್ ಬರ್ಪುಜಿ ಬ್ರೋ… ಈ ಸಿನಿಮಾ ಬಿಡುಗಡೆಗೂ ಮುನ್ನವೇ ಬಹಳಷ್ಟು ಸುದ್ದಿ ಮಾಡುವ ಮೂಲಕ ತುಳು ಸಿನಿಮಾ ರಂಗದಲ್ಲೇ ಹೊಸ ಇತಿಹಾಸ ಸೃಷ್ಟಿಸಿರೋ ಈ ಸಿನಿಮಾ…. ಮಂಗಳೂರು ಅಕ್ಮೆ ಮೂವೀಸ್ ಇಂಟರ್ನ್ಯಾಷನಲ್ ಲಾಂಛನದಲ್ಲಿ ನಿರ್ಮಾಣವಾಗಿರೋ ದುಬೈಯ ಖ್ಯಾತ ಉದ್ಯಮಿ, ಕನ್ನಡ ಸಿನಿಮಾ ನಿರ್ಮಾಪಕರಾದ ಹರೀಶ್ ಶೇರಿಗಾರ್ ಮತ್ತು ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ ಈ ಚಿತ್ರ ಇದೇ ಬರುವ ಮಾರ್ಚ್ 26ರಂದು ಮಂಗಳೂರು-ಉಡುಪಿ-ಬೆಂಗಳೂರು-ಮೈಸೂರು ಸೇರಿದಂತೆ ಕರ್ನಾಟಕ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ಏಕಕಾಲದಲ್ಲಿ ಬಿಡುಗಡೆಗೊಳ್ಳಲಿದೆ. ಈ ಬಗ್ಗೆ ದುಬೈಯ ಖ್ಯಾತ ಉದ್ಯಮಿ, ಕನ್ನಡ ಸಿನಿಮಾ ನಿರ್ಮಾಪಕರಾದ ಹರೀಶ್ ಶೇರಿಗಾರ್ ನಗರದ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ರು.
ಬಳಿಕ ಸಿನಿಮಾದ ನಿರ್ದೇಶಕ ಕೆ. ಸೂರಜ್ ಶೆಟ್ಟಿ ಮಾತನಾಡಿ, 8ಕೆ ಕ್ಯಾಮರಾ ಬಳಸಿದ ಮೊದಲ ತುಳು ಸಿನಿಮಾವಾಗಿದೆ. ಜೊತೆಗೆ ಬೆಂಗಳೂರಿನ ಪ್ಲಾಲೇಸ್‍ನಲ್ಲಿ ಚಿತ್ರಿಸಿದ ಹೆಗ್ಗಳಿಕೆ ಕೂಡಾ ಈ ಸಿನಿಮಾಕ್ಕಿದ್ದು ಒಟ್ಟು ಒಂದೂವರೆ ಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗಿದೆ ಎಂದ್ರು.
ಬಳಿಕ ಸಿನಿಮದ ನಾಯಕ ನಟ ಪೃಥ್ವಿ ಅಂಬರ್ ಮಾತನಾಡಿ, ಬೇರೆ ಇಂಡಸ್ಟ್ರಿಗೆ ಸರಿ ಸಮಾನವಾಗಿ ತುಳು ಸಿನಿಮಾ ನಿಲ್ಲಬೇಕು ಅನ್ನೋ ಕಾರಣದಿಂದ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಎಂದ್ರು.
ಸುದ್ದಿಗೋಷ್ಟಿಯಲ್ಲಿ ಸಿನಿಮಾದ ನಟಿ ನವ್ಯಾ ಪೂಜಾರಿ ಉಪಸ್ಥಿತರಿದ್ದರು.
ಇನ್ನು ಈ ಚಿತ್ರದಲ್ಲಿ ತುಳು ರಂಗಭೂಮಿಯ ಖ್ಯಾತ ಹಾಸ್ಯ ನಟರಾದ ಅರವಿಂದ್ ಬೋಳಾರ್, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರು, ವಿಸ್ಮಯ್ ವಿನಾಯಕ್, ದೀಪಕ್ ರೈ, ನಾಯಕ ನಟನಾಗಿ ಪೃಥ್ವಿ ಅಂಬರ್, ನಟಿ ನವ್ಯ ಪೂಜಾರಿ, ಹಾಗೂ ಪ್ರಥಮ ಬಾರಿಗೆ ತುಳು ಚಿತ್ರರಂಗ ಪ್ರವೇಶಿಸಿ ವಿಶೇಷ ಪಾತ್ರದಲ್ಲಿ ಕನ್ನಡದ ಹಿರಿಯ ನಟ ಅನಂತ್ ನಾಗ್ ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.
ಒಟ್ಟಿನಲ್ಲಿ ಇದೇ ಬರುವ ಮಾರ್ಚ್ 26ರಂದು ಇಂಗ್ಲೀಷ್ ಎಂಕ್ಲೆಗ್ ಬರ್ಪುಜಿ ಬ್ರೋ ಸಿನಿಮಾ ರಿಲೀಸ್ ಆಗಲಿದ್ದು, ಸಿನಿ ಪ್ರೇಕ್ಷಕರು ಕಾತುರರಾಗಿದ್ದಾರೆ.

Related posts

Leave a Reply

Your email address will not be published. Required fields are marked *