Header Ads
Breaking News

ಮಾರ್ಚ್ 27ರಂದು ವಿಶ್ವ ರಂಗಭೂಮಿ ದಿನಾಚರಣೆ

ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಹಾಗೂ ಕರಾವಳಿ ಕರ್ನಾಟಕ ರಂಗ ಕಲಾವಿದರ ಸೇವಾ ಪರಿಷತ್, ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆ ಇವರ ಸಹಯೋಗದೊಂದಿಗೆ ವಿಶ್ವ ರಂಗಭೂಮಿ ದಿನಾಚರಣೆಯನ್ನು ಮಾರ್ಚ್ 27ರಂದು ಅಸೈಗೋಳಿಯ ಅಭಯ ಆಶ್ರಯದಲ್ಲಿ ನಡೆಯಲಿದೆ.
ಈ ಬಗ್ಗೆ ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರಾವಳಿ ಕರ್ನಾಟಕ ರಂಗ ಕಲಾವಿದರ ಸೇವಾ ಪರಿಷತ್‍ನ ಅಧ್ಯಕ್ಷರಾದ ಮೋಹನ್‍ದಾಸ್ ಕೊಟ್ಟಾರಿ ಅವರು, ಸಮಾನ ಮನಸ್ಕ ಕಲಾವಿದರನ್ನು ಒಟ್ಟುಗೂಡಿಸಿ ಕಲಾವಿದರ ರಕ್ಷಣೆ, ಹಿತದೃಷ್ಠಿಗೋಸ್ಕರ ಕಲಾವಿದರಿಗೋಸ್ಕರ ಜನವರಿ 1, 2020ರಂದು ರಚಿಸಲಾಯಿತು ಎಂದ ಅವರು, ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು ಇದೀಗ ಮಾರ್ಚ್ 27ರಂದು ವಿಶ್ವ ರಂಗ ಭೂಮಿ ದಿನಾಚರಣೆಯನ್ನು ವಿಜೃಂಭಣೆಯಿಂದ ನಡೆಸುವುದೆಂದು ತೀರ್ಮಾನಿಸಲಾಗಿದೆ ಎಂದು ಹೇಳಿದರು.ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಕಾರ್ಯದರ್ಶಿ ರಾಜೇಶ್ ಕಣ್ಣೂರು, ಉಪಾಧ್ಯಕ್ಷರಾದ ಸುನೀತಾ ಎಕ್ಕೂರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *