Header Ads
Breaking News

ಮಾರ್ಚ್ 30ರಂದು ತೊಕ್ಕೊಟ್ಟಿನಲ್ಲಿ ಬಿಜೆಪಿ ಪೇಜ್ ಪ್ರಮುಖ್ ಸಮಾವೇಶ

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರನ್ನು ಮೂರು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲಿಸುವ ಸಲುವಾಗಿ ವರಿಷ್ಠರ ನಿರ್ದೇಶನದಂತೆ ನೂತನ ಕಾರ್ಯತಂತ್ರಗಳನ್ನು ಪಕ್ಷದ ಕಾರ್ಯಕರ್ತರಿಗೆ ತಿಳಿಸುವ ಸಲುವಾಗಿ ಕಾರ್ಯಕರ್ತರು ಹಾಗೂ ಪೇಜ್ ಪ್ರಮುಖರ ಸಮಾವೇಶ ಮಾ. 30ರಂದು ಗಟ್ಟಿ ಸಮಾಜಭವನದಲ್ಲಿ ನಡೆಯಲಿದೆ ಎಂದು ಬಿಜೆಪಿ ಮಂಗಳೂರು ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು ಹೇಳಿದರು.

ತೊಕ್ಕೊಟ್ಟು ಕಾಪಿಕಾಡಿನ ಚುನಾವಣಾ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮತ್ತೊಮ್ಮೆ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಆಡಳಿತ ನಡೆಸುವುದು ಶತಸಿದ್ಧ. ಅದಕ್ಕಾಗಿ ತಳಮಟ್ಟದಿಂದ ಬಿಜೆಪಿ ರಾಷ್ಟ್ರಾಧ್ಯಕ್ಷರ ತನಕ ನಿತ್ಯ ನಿರಂತರ ಕಾರ್ಯತಂತ್ರಗಳು ನಡೆಯುತ್ತಾ ಇದೆ. ಲೋಕಸಭಾ ಚುನಾವಣೆಯಲ್ಲಿ ಭಾಜಪಕ್ಕೆ ಮಂಗಳೂರು ಕ್ಷೇತ್ರದಲ್ಲಿ ಮತಗಳ ಅಂತರ ಹೆಚ್ಚಿಸಬೇಕಿದ್ದು ಆ ನಿಟ್ಟಿನಲ್ಲಿ ಸಾಂಘಿಕ ಪ್ರಯತ್ನ ಯಶಸ್ವಿಯಾಗಲಿದೆ ಎಂದರು.

ಮಾ. 30ರಂದು ನಡೆಯುವ ಪೇಜ್ ಪ್ರಮುಖರ ಕಾರ್ಯಕರ್ತರ ಜೊತೆಯಲ್ಲಿ ಪ್ರಬುದ್ಧರು, ಫಲಾನುಭವಿಗಳ ಸಮಾವೇಶ ನಡೆಯಲಿದೆ. ಜಿಲ್ಲಾ ಸಮಿತಿ ನಿರ್ದೇಶನದಂತೆ ಅನುಭವಿಗಳು, ಹಿರಿಯರು, ಕಿರಿಯರನ್ನು ಚುನಾವಣ ಸಮಿತಿಯಲ್ಲಿ ಸೇರಿಸಿಕೊಂಡು ಜವಬ್ದಾರಿ ಕೊಡಲಾಗಿದೆ. ಪೇಜ್ ಪ್ರಮುಖ್, ಗ್ರಾಮ ಸಮಿತಿ, ಬೂತ್ ಸಮಿತಿ, ಶಕ್ತಿ ಕೇಂದ್ರ, ಮಹಾ ಶಕ್ತಿ ಕೇಂದ್ರ ಅದರ ಜವಬ್ದಾರಿ ನಿರ್ವಹಿಸಿದೆ ಎಂದು ನುಡಿದರು.

ಮಾಜಿ ಶಾಸಕ ಕೆ. ಜಯರಾಮ ಶೆಟ್ಡಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ,ಚಂದ್ರಹಾಸ್ ಉಳ್ಳಾಲ್, ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಹಾಗೂ ನಮಿತಾ ಶ್ಯಾಂ, ಕ್ಷೇತ್ರ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *