Header Ads
Header Ads
Breaking News

ಮಾರ್ಚ್ 7ರಂದು ದೇಶದಾದ್ಯಂತ ಜನೌಷಧ ದಿನಾಚರಣೆ.

ಮಾರ್ಚ್ 7 ರಂದು ದೇಶದಾದ್ಯಂತ ಜನೌಷಧಿ ದಿನಾಚರಣೆಯನ್ನಾಗಿ ಘೋಷಿಸಲಾಗಿದ್ದು, ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕರ್ನಾಟಕದಲ್ಲಿ ಈ ಸಂಬಂಧ ಎರಡು ಕಾರ್ಯಕ್ರಮಗಳು ನಡೆಯಲಿದ್ದು, ಬೆಂಗಳೂರಿನ ಯಲಹಂಕ ಜನೌಷಧಿ ಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮವನ್ನು ಉದ್ಧೇಶಿಸಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ರಾಜ್ಯದಲ್ಲಿ ಎರಡು ಕಡೆಗಳಲ್ಲಿ ಮಾತ್ರ ಈ ಕಾರ್ಯಕ್ರಮ ನಡೆಯಲಿದ್ದು, ಪುತ್ತೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜನೌಷಧಿ ಕೇಂದ್ರದ ರಾಜ್ಯದ ಉಸ್ತುವಾರಿ ಡಾ. ಅನಿಲ ಮಾಹಿತಿ ನೀಡಿದರು. ಪುತ್ತೂರು ನಗರದ ಬೊಳುವಾರಿನಲ್ಲಿರುವ ಪ್ರಗತಿ ಆಸ್ಪತ್ರೆಯ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಮೊದಲು ಪುತ್ತೂರು ಸರಕಾರಿ ಆಸ್ಪತ್ರೆಯಿಂದ ಬೊಳುವಾರು ತನಕ ಕಾಲ್ನಡಿಗೆ ಜಾಥಾ ಕೂಡಾ ನಡೆಯಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

Related posts

Leave a Reply

Your email address will not be published. Required fields are marked *