Header Ads
Breaking News

ಮಾರ್ಚ್ 7ರಂದು ಪುತ್ತೂರಿನಲ್ಲಿ ಕೊರೋನಾ ವೈರಸ್ ಸೋಂಕು ಜಾಗೃತಿ ಶಿಬಿರ

ಜಾಗತಿಕ ಮಟ್ಟದಲ್ಲಿ ಭಯದ ವಾತಾವರಣದಲ್ಲಿರುವ ಕೊರೋನಾ ವೈರಸ್ ಸೋಂಕು ಕುರಿತು ಕರ್ನಾಟಕದಲ್ಲೇ ಪ್ರಥಮ ಬಾರಿಗೆ ಪುತ್ತೂರಿನಲ್ಲಿ ವಿದ್ಯಾರ್ಥಿಗಳಿಗೆ ಜಾಗ್ರತಿ ಶಿಬಿರ ಹಮ್ಮಿ ಕೊಳ್ಳಲಾಗಿದೆ. ಕಾರ್ಯಕ್ರಮ ಕೊಂಬೆಟ್ಟಿನ ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ” ಬಂಟರ ಭವನ” ದಲ್ಲಿ ಜರುಗಲಿದೆ ಎಂದು ಲಯನ್ಸ್ ಕ್ಲಬ್ ಪುತ್ತೂರು ಕಾವು ಇದರ ಸ್ಥಾಪಕ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಕಾರದೊಂದಿಗೆ ಯುವ ಬಂಟರ ಸಂಘ ಪುತ್ತೂರು ತಾಲೂಕು ಮತ್ತು ಶ್ರೀ ರಾಮಕ್ರಷ್ಣ ಪ್ರೌಢ ಶಾಲೆಯ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸುಮಾರು ಒಂದು ಸಾವಿರ ವಿದ್ಯಾರ್ಥಿಗಳು ಮಾಹಿತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಜಿಲ್ಲಾ ನಿವ್ರತ್ತ ಆರೋಗ್ಯಾಧಿಕಾರಿ ಡಾ.ರಾಮಕ್ರಷ್ಣ ರಾವ್ ಮಾಹಿತಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಕಾಗೋಷ್ಠಿಯಲ್ಲಿ ಲಯನ್ಸ್ ಕ್ಲಬ್ ಪುತ್ತೂರು ಕಾವು ಇದರ ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಸಾಂತ್ಯ, ಯುವ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ರೈ ಸಾರಕರೆ, ಪ್ರಧಾನ ಕಾರ್ಯದರ್ಶಿ ಬೊಳಿಂಜಗುತ್ತು ರವಿಪ್ರಸಾದ್ ಶೆಟ್ಟಿ ಬನ್ನೂರು, ಉಪಾಧ್ಯಕ್ಷ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *