Header Ads
Header Ads
Breaking News

ಮಾರ್ಚ್ 9 ಮತ್ತು 10ರಂದು ಪುತ್ತೂರಿನ ಕರ್ಮಲ ಜಾತ್ರಾ ಮಹೋತ್ಸವ

ಪುತ್ತೂರು ತಾಲೂಕಿನ ಬನ್ನೂರು ಕರ್ಮಲದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವವು ಮಾ. 9 ಮತ್ತು 10ರಂದು ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಯು ಲೋಕೇಶ್ ಹೆಗ್ಡೆ ಹೇಳಿದರು.

ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜಾತ್ರಾ ಮಹೋತ್ಸವವು ಕುಕ್ಕಾಡಿ ತಂತ್ರಿ ಶ್ರೀ ಪ್ರೀತಂ ಪುತ್ತೂರಾಯ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕರ್ಮಲ ಜಾತ್ರೆಯು 2ದಿನಗಳ ಕಾಲ ನಡೆಯಲಿದೆ ಎಂದರು.
ಜಾತ್ರಾ ಮಹೋತ್ಸವದ ಮೊದಲನೇ ದಿನ ಮಾ.9ರಂದು ಬೆಳಗ್ಗೆ 8ರಿಂದ ಗಣಪತಿ ಹವನ, ಕಲಶ ಪೂಜೆ, ಕಲಶಾಭಿಷೇಕ ನಡೆಯಲಿದ್ದು, 10ರಿಂದ ನಾಗದೇವರ ಪ್ರೀತ್ಯರ್ಥವಾಗಿ ಸಾಮೂಹಿಕ ಆಶ್ಲೇಶ ಬಲಿ ಪೂಜೆ ನಡೆಯಲಿದೆ.
2ನೇ ದಿನ ಮಾ. 10ರಂದು ಬೆಳಗ್ಗೆ 9.30ರಿಂದ ಸತ್ಯ ನಾರಾಯಣ ಪೂಜೆ ನಡೆಯಲಿದೆ. ಮಧ್ಯಾಹ್ನ 12ರಿಂದ ಮಹಪೂಜೆ, ಶ್ರೀ ದರ್ಶನ ಪಾತ್ರಿ ಅವರಿಂದ ಶ್ರೀ ದೇವಿ ದರ್ಶನ ಮತ್ತು ಅಭಯ ನುಡಿ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಸಂಚಾಲಕ ಹಾಗೂ ಧರ್ಮದರ್ಶಿ ಕೆ. ರಾಜಣ್ಣ, ಕ್ಷೇತ್ರದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ದಿನಕರ ಗೌಡ ಬುಡ್ಲೆಗುತ್ತು, ಕ್ಷೇತ್ರದ ಉತ್ಸವ ಸಮಿತಿಯ ಅಧ್ಯಕ್ಷ ವಿಶ್ವನಾಥ ಗೌಡ ಬನ್ನೂರು, ಸಮಿತಿ ಸದಸ್ಯ ಕೃಷ್ಣಪ್ಪ ಗೌಡ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *