Header Ads
Breaking News

ಮಾರ್ಚ್31ರಂದು ಮತದಾನದ ಕುರಿತು ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮ್ಯಾರಾಥಾನ್

ಮತದಾನದ ಕುರಿತು ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದ.ಕ.ಜಿಲ್ಲಾ ಸ್ವೀಪ್ ಸಮಿತಿ ನಿರ್ಣಯದಂತೆ, ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾ ನಗರ ಪಾಲಿಕೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇವರ ಸಹಭಾಗಿತ್ವದಲ್ಲಿ ಮಾರ್ಚ್ 31ರಂದು ಜಿಲ್ಲಾ ಮಟ್ಟದ ಮ್ಯಾರಾಥಾನ್ ನಡೆಯಲಿದೆ ಎಂದು ಪಾಲಿಕೆಯ ಆಯುಕ್ತರಾದ ಮಹಮ್ಮದ್ ನಜೀರ್ ಹೇಳಿದರು.

ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, 31ನೇ ತಾರೀಕಿನಂದು ಬೆಳಿಗ್ಗೆ 7 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಿಂದ ‘ಮತದಾನದ ಕಡೆಗೆ ನಮ್ಮ ನಡಿಗೆ 2019’ ಎನ್ನುವ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ 16 ವರ್ಷಕಿಂತ ಮೇಲ್ಪಟ್ಟವರಿಗೆ 18 ಕಿ.ಮೀನ ಮ್ಯಾರಾಥಾನ್ ಮತ್ತು 16 ವರ್ಷಕಿಂತ ಒಳಗಿನವರಿಗೆ 6 ಕಿ.ಮೀ.ನ ಮ್ಯಾರಾಥಾನ್ ಆಯೋಜಿಸಲಾಗಿದೆ ಎಂದು ಮ್ಯಾರಾಥಾನ್‍ನ ಸಂಪೂರ್ಣ ಮಾಹಿತಿ ನೀಡಿದರು.

ಈ ಸಂದರ್ಭ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಡಾ.ಸೆಲ್ವಮಣಿ.ಆರ್, ಪಾಲಿಕೆಯ ಉಪ ಆಯುಕ್ತರಾದ ಗಾಯತ್ರಿ ನಾಯಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *