Header Ads
Header Ads
Breaking News

ಮಾರ್ಚ್4ರಿಂದ 13ರ ವರೆಗೆ ಇತಿಹಾಸ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಸ್ಥಾನ ಪುನರ್ ಪ್ರತಿಷ್ಠೆ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವ

ಬಂಟ್ವಾಳ: ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಪುನರ್ ಪ್ರತಿಷ್ಟೆ, ಅಷ್ಟಬಂಧ, ನೂತನ ಧ್ವಜಸ್ತಂಭ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಮಾ.4 ರಿಂದ 13 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಬ್ರಹ್ಮಕಲಶ ಸಮಿತಿ ಅಧ್ಯಕ್ಷ, ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಗುತ್ತು ತಿಳಿಸಿದರು.ಮಂಗಳವಾರ ದೇವಸ್ಥಾನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 20 ಕೋ.ರೂ.ವೆಚ್ಚದಲ್ಲಿ ದೇವಳವನ್ನು ನವೀಕರಣಗೊಳಿಸಲಾಗಿದ್ದು, ಶ್ರೀ ದುರ್ಗಾಪರಮೇಶ್ವರಿ, ಶ್ರೀ ರಾಜರಾಜೇಶ್ವರಿ,ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರುಗಳ ಹಾಗೂ ಪರಿವಾರ ಸಾನಿಧ್ಯಗಳ ಗರ್ಭಗೃಹಗಳನ್ನು ಪುನರ್ ನಿರ್ಮಾಣಗೊಂಡಿದೆ ಎಂದು ಅವರು ವಿವರಿಸಿದರು. ಹತ್ತು ದಿನಗಳ ಕಾಲ ನಡೆಯಲಿರುವ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಪ್ರತಿನಿತ್ಯ ವಿವಿಧ ವೈಧಿಕ, ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ರಾತ್ರಿವರೆಗೂ ಮೂಡಬಿದ್ರೆ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ್ ಆಳ್ವ ಅವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.ಬ್ರಹ್ಮಕಲಶಾಭಿಷೇಕ ನಡೆಯಲಿರುವ ಮಾ.೧೩ ಸೇರಿದಂತೆ ಹತ್ತು ದಿನಗಳ ಕಾಲ ಕ್ಷೇತ್ರಕ್ಕೆ ಸುಮಾರು 10 ಲಕ್ಷ ಜನರು ಸೇರುವ ನಿರೀಕ್ಷೆ ಇದ್ದು, ಪ್ರತಿಯೊಬ್ಬ ಭಕ್ತರಿಗೆ ನಿರಂತರ ಉಪಹಾರ ಹಾಗೂ ಅನ್ನದಾಸೋಹ ವ್ಯವಸ್ಥೆ ಕಲ್ಪಿಸಲಾಗಿದೆ. ಬ್ರಹ್ಮಕಲಶೋತ್ಸವದ ಯಶಸ್ವಿಗಾಗಿ ವಿವಿಧ ಸಮಿತಿ ಹಾಗೂ ಉಪಸಮಿತಿಯ ಮಾರ್ಗದರ್ಶನದಲ್ಲಿ ಕಾರ್ಯಕರ್ತರು ಹಗಲಿರುಳು ಶ್ರಮವಹಿಸುತ್ತಿದ್ದಾರೆ. ಹತ್ತು ದಿನಗಳ ಕಾಲ ಸಕಲ ವ್ಯವಸ್ಥೆಗಳ ಸುಧಾರಣೆ ಮತ್ತು ನಿರ್ವಹಣೆಗಾಗಿ ಸ್ವಯಂಸೇವಕರನ್ನು ಆಹ್ವಾನಿಸಿದ್ದು, ಈಗಾಗಲೇ ಒಂದು ಸಾವಿರ ಮಹಿಳೆಯರು, ಎರಡು ಸಾವಿರ ಪುರುಷರು ಹೆಸರು ನೋಂದಾಯಿಸಿದ್ದು, ಸ್ವಯಂಸೇವಕರ ಸಂಖ್ಯೆ ಐದು ಸಾವಿರ ದಾಟುವ ನಿರೀಕ್ಷೆ ಇದ್ದು,ಇವರನ್ನು ಗುಂಪಿಗಳಾಗಿ ವಿಂಗಡಿಸಿ, ಈ ಗುಂಪಿಗೆ ಒಬ್ಬರನ್ನು ನಾಯಕನನ್ನಾಗಿ ನಿಯೋಜಿಸಲಾಗುವುದು ಎಂದರು.
ದೇವಳಕ್ಕೆ ಭೇಟಿ ನೀಡುವ ಭಕ್ತರ ಅನುಕೂಲಕ್ಕಾಗಿ ಸುಮಾರು ಇಪ್ಪತ್ತು ಎಕ್ರೆ ಜಮೀನಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಹಾಗೂ ಸರಕಳ್ಳರ ಮತ್ತು ಕಿಸೆ ಕಳ್ಳರ ಹಾವಳಿ ತಪ್ಪಿಸಲು ಸುರಕ್ಷತೆಯ ದೃಷ್ಟಿಯಿಂದ ದೇವಳದ ಸುತ್ತ ಸಿಸಿ ಕ್ಯಾಮರ ಅಳವಡಿಸಲಾಗುವುದು, ಪಾರ್ಕಿಂಗ್ ಜಾಗದಿಂದಲೇ ಭಕ್ತರಿಗೆ ದೇವಳಕ್ಕೆ ನಡೆದುಕೊಂಡು ಬರಲು ರೆಡ್‌ಕಾರ್ಪೆಟ್ ವ್ಯವಸ್ಥೆ ಹಾಕಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಹೊರೆಕಾಣಿಕೆ ಸಮಿತಿಯ ಗೌರವಾಧ್ಯಕ್ಷ ಬಿ.ನಾಗರಾಜ ಶೆಟ್ಟಿ ,ಗೌರವಾಧ್ಯಕ್ಷ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ದೇವಳದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ, ಪ್ರಧಾನ ಆರ್ಚಕ ಮಾಧವ ಭಟ್, ಅನುವಂಶಿಕ ಮೊಕ್ತೇಸರ ಚೇರ ಸೂರ್ಯ ನಾರಾಯಣ ರಾವ್, ಪ್ರಚಾರ ಸಮಿತಿ ಅಧ್ಯಕ್ಷೆ ಡಾ.ಆಶಾ ಜ್ಯೋತಿ ರೈ, ಸಮಿತಿ ಪದಾಧಿಕಾರಿಗಳಾದ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ವೆಂಕಟೇಶ ತಂತ್ರಿ, ಮಾಧವ ಮಯ್ಯ, ಸುಬ್ರಾಯ ಕಾರಂತ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಚಂದ್ರಹಾಸ ಶೆಟ್ಟಿ , ಕಾರ್ಯ ನಿರ್ವಹಣಾಧಿಕಾರಿ ಪ್ರವೀಣ್ ಮೊದಲಾದವರಿದ್ದರು.

Related posts

Leave a Reply

Your email address will not be published. Required fields are marked *