Header Ads
Header Ads
Breaking News

ಮಾರ್ಚ್8ರಂದು ಪುತ್ತೂರು ಹಿರಿಯ ನಾಗರಿಕರ ಹಿತರಕ್ಷಣಾ ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು ಹಿರಿಯ ನಾಗರಿಕರ ಹಿತರಕ್ಷಣಾ ಸಂಘದ ವಾರ್ಷಿಕ ಮಹಾಸಭೆ ಮಾ.8 ಶುಕ್ರವಾರ ಇಲ್ಲಿಯ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ಸಿ.ಜನಾರ್ದನನ್ ತಿಳಿಸಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿರಿಯ ನಾಗರಿಕ ಸಂಘ 2011 ರಿಂದ ನಗರಸಭೆಯ ಸಮುದಾಯ ಭವನದಲ್ಲಿ ಕಾರ್ಯಾಚರಿಸುತ್ತಿದ್ದು,. ನಮ್ಮ ಸಂಘದಲ್ಲಿ ಪ್ರಸ್ತುತ 1135 ಮಂದಿ ಸದಸ್ಯರಿದ್ದಾರೆ. ಈಗಾಗಲೇ 742 ಮಂದಿಗೆ ಹಿರಿಯ ನಾಗರಿಕ ಗುರುತು ಚೀಟಿಯನ್ನು ಸಂಘದ ವತಿಯಿಂದ ಒದಗಿಸಲಾಗಿದೆ ಎಂದು ತಿಳಿಸಿದರು.

ಬೆಳಗ್ಗೆ 10 ಗಂಟೆಗೆ ಸಂಘದ ಅಧ್ಯಕ್ಷ ಕೆ.ಸಿ.ಜನಾರ್ದನನ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಸಂಜೀವ ಮಠಂದೂರು, ಸಹಾಯಕ ಆಯುಕ್ತ ಕೃಷ್ಣಮೂರ್ತಿ ಹೆಚ್.ಕೆ., ತಹಶೀಲ್ದಾರ್ ಡಾ.ಪ್ರದೀಪ ಕುಮಾರ್, ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಹಿರಿಯ ಸದಸ್ಯ ಗೋಪಾಲಕೃಷ್ಣ ಭಟ್ ಸಾಮೆತ್ತಡ್ಕ ಅವರನ್ನು ಸನ್ಮಾನಿಸಲಾಗುವುದು ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಪ್ಯಾಟ್ರಿಕ್ ಲೋಬೋ, ಸದಸ್ಯರಾದ ಕೆ.ಗೋಪಾಲಕೃಷ್ಣ ಭಟ್ ಸಾಮೆತ್ತಡ್ಕ, ಎಂ.ಅಬೂಬಕ್ಕರ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *