Header Ads
Header Ads
Breaking News

ಮಾರ್ಚ್8 ರಿಂದ 21ರ ವರೆಗೆ ಪುತ್ತೂರು ತಾಲೂಕಿನ ನಿಡ್ಪಳ್ಳಿ ಗ್ರಾಮದ ಶ್ರೀ ಶಾಂತಾದುರ್ಗಾ ದೇವಸ್ಥಾನ ಜಾತ್ರೋತ್ಸವ

ಪುತ್ತೂರು ತಾಲೂಕಿನ ನಿಡ್ಪಳ್ಳಿ ಗ್ರಾಮದ ಶ್ರೀ ಶಾಂತಾದುರ್ಗಾ ದೇವಸ್ಥಾನ ಮತ್ತು ಶ್ರೀ ಕಿನ್ನಿಮಾಣಿ-ಪೂಮಾಣಿ ಪರಿವಾರ ದೈವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಜಾತ್ರೋತ್ಸವ ಮಾ.8 ರಿಂದ 21 ರ ತನಕ ವಿವಿಧ ಧಾರ್ಮಿಕ, ಸಭಾ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮಾತನಾಡಿ, 2.5 ಎಕ್ರೆ ಜಾಗದಲ್ಲಿ ಸುಮಾರು 3.5 ಕೋಟಿ ರೂ. ವೆಚ್ಚದಲ್ಲಿ ಕೇರಳ ಶೈಲಿಯಲ್ಲಿ ನಿರ್ಮಾಣಗೊಂಡಿರುವ ದೇವಸ್ಥಾನದಲ್ಲಿ ಕೆಂಪು ಕಲ್ಲಿನ ಶಿಲೆಯಲ್ಲಿ ಗರ್ಭಗುಡಿ, ತಾಮ್ರದ ಛಾವಣಿ ನಿರ್ಮಿಸಲಾಗಿದೆ. ಅಲ್ಲದೆ. ಸಭಾ ವೇದಿಕೆ, ಅನ್ನಛತ್ರ, ಪಾಕಶಾಲೆ ಮುಂತಾದ ಮಹತ್ವದ ಕೆಲಸ ಕಾರ್ಯಗಳು ಸಂಪೂರ್ಣಗೊಂಡಿದ್ದು, ಬ್ರಹ್ಮಕಲಶೋತ್ಸವಕ್ಕೆ ಎಲ್ಲಾ ಸಿದ್ಧತೆಗಳು ನಡೆದಿದೆ ಎಂದರು. ಬ್ರಹ್ಮಕಲಶೋತ್ಸವದ ಅಂಗವಾಗಿ ಮಾ.8 ರಂದು ಬೆಳಗ್ಗೆ ಸ್ಥಳೀಯ ಗ್ರಾಮ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಪ್ರತೀ ದಿನ ಸುಮಾರು 8-10 ಸಾವಿರ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದ್ದು, ಮುಖ್ಯವಾಗಿ ಮಾ.13 ರಂದು ಶ್ರೀ ದೇವರ ಮತ್ತು ದೈವಗಳ ಪ್ರತಿಷ್ಠೆ ಮತ್ತು ಮಾ.16 ರಂದು ಬ್ರಹ್ಮಕಲಶೋತ್ಸವ, ಪ್ರತೀ ದಿನ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಾದಿಗಳು, ಅತಿಥಿಗಳನ್ನು ಸ್ವಾಗತಿಸಲು ಈಗಾಗಲೇ 25 ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ದಿನ ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರಗಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮನಾಭ ಬೋರ್ಕರ್ ಬ್ರಹ್ಮರಗುಂಡ, ಕೋಶಾಧಿಕಾರಿ ತಿಮ್ಮಣ್ಣ ರೈ ಆನಾಜೆ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ದಾಮೋದರ ರೈ ಪಡ್ಡಂಬೈಲು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *