Header Ads
Breaking News

ಮಾಸ್ಕ್ ಸ್ಟಾಕ್ ಇದೆ ಹೆಚ್ಚು ಹಣಕ್ಕೆ ಮಾರಾಟ ಮಾಡಿದರೆ ಅವರ ವಿರುದ್ಧ ಕ್ರಮ : ಆರೋಗ್ಯ ಸಚಿವ ಶ್ರೀ ರಾಮುಲು ಹೇಳಿಕೆ

ಕೋವಿಡ್-19 ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ರಾಜ್ಯದಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸರಕಾರ ಇದನ್ನು ಸವಾಲಾಗಿ ಸ್ವೀಕರಿಸಿ ತಡೆಗಟ್ಟಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಮಂಗಳೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಸಹಿತ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಬೇರೆ ದೇಶದಿಂದ ರಾಜ್ಯಕ್ಕೆ ಬರುವವರನ್ನು ಸ್ಕ್ಯಾನಿಂಗ್ ಮಾಡಲಾಗುತ್ತಿದೆ. ಈವರೆಗೆ 1ಲಕ್ಷ 85ಸಾವಿರ ಮಂದಿಯನ್ನು ಸ್ಕ್ಯಾನಿಂಗ್ ಮಾಡಲಾಗಿದೆ. ಇನ್ನು ರಾಜ್ಯದಲ್ಲಿ ಮೂರು ತಿಂಗಳಿಗೆ ಬೇಕಾದಷ್ಟು ಮಾಸ್ಕ್ ಸ್ಟಾಕ್ ಇದೆ. ಆದ್ರೆ ಹೆಚ್ಚು ಹಣಕ್ಕೆ ಮಾರಾಟ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶ್ರೀ ರಾಮುಲು ವಾರ್ನಿಂಗ್ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *