Header Ads
Header Ads
Breaking News

ಮಾ.20ರಂದು ರಾಹುಲ್ ಗಾಂಧಿ ದ.ಕ. ಜಿಲ್ಲಾ ಪ್ರವಾಸ ಮಂಗಳೂರಿನಲ್ಲಿ ಸಚಿವ ರಮಾನಾಥ ರೈ ಮಾಹಿತಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ 20ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸಚಿವ ರಮಾನಾಥ ರೈ ತಿಳಿಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಬೆಳಿಗ್ಗೆ 11.30ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಉಡುಪಿಯ ಕಾಪುವಿನಲ್ಲಿ ನಡೆಯುವ ಸೇವಾದಳದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನಾರ್ಶಿವಾದ ಯಾತ್ರೆ ಆರಂಭಿಸಲಿದ್ದಾರೆ.3.30ಕ್ಕೆ ಮುಲ್ಕಿ ಮತ್ತು 4.20ಕ್ಕೆ ಸುರತ್ಕಲ್‌ನಲ್ಲಿ ಜನಾರ್ಶೀವಾದ ಯಾತ್ರೆ ಮುಂದುವರಿಸಲಿದ್ದಾರೆ ಎಂದರು. ಸಂಜೆ 5.20ಕ್ಕೆ ನಗರದ ಅಂಬೇಡ್ಕರ್ ವೃತ್ತದಿಂದ ನೆಹರೂ ಮೈದಾನದವದರೆಗೆ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಸಂಜೆ ಆರು ಗಂಟೆಗೆ ನೆಹರೂ ಮೈದಾನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದ ಅವರು, ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಮತ್ತು ರಾಷ್ಟ್ರದ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಚಿವ ಯು.ಟಿ. ಖಾದರ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ, ಮೂಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ನಾಗರಾಜ್ ಮಂಗಳೂರು