Header Ads
Breaking News

ಮಾ.27ರಂದು ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ

 ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ “ಮೇಲ್ತೆನೆ’ (ಬ್ಯಾರಿ ಎಲ್ತ್‌ಕಾರ್ ಪಿನ್ನೆ ಕಲಾವಿದಮ್ಮಾರೊ ಕೂಟ, ದೇರಳಕಟ್ಟೆ)ಯ ಸಹಕಾರದಲ್ಲಿ ಉಳ್ಳಾಲ ತಾಲೂಕು ಪ್ರಥಮ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನವು ಮಾ.27ರಂದು ಉಳ್ಳಾಲ ಅಳೇಕಲದ ಮದನಿ ಪಿಯು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದ್ದಾರೆ.
ಅಕಾಡಮಿಯ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉಳ್ಳಾಲ ತಾಲೂಕು ಘೋಷಣೆಯಾದ ಬಳಿಕ ನಡೆಯುವ ಪ್ರಪ್ರಥಮ ಬ್ಯಾರಿ ಸಾಹಿತ್ಯ ಸಮ್ಮೇಳನ ಇದಾಗಿದೆ. ಅಲ್ಲದೆ ಬ್ಯಾರಿ ಆಂದೋಲನದ ಇತಿಹಾಸದಲ್ಲೇ ನಡೆಯುವ ತಾಲೂಕು ಮಟ್ಟದ ಪ್ರಥಮ ಬ್ಯಾರಿ ಸಾಹಿತ್ಯ ಸಮ್ಮೇಳನವೂ ಇದಾಗಿದೆ. ಸಾಹಿತಿಕ, ಕವಿ ಆಲಿಕುಂಞಿ ಪಾರೆ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಪದ್ಮಶ್ರೀ ಪುರಸ್ಕೃತರ ಹರೇಕಳ ಹಾಜಬ್ಬ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ವಹಿಸಲಿದ್ದಾರೆ ಎಂದರು. ಸ್ವಾಗತ ಸಮಿತಿಯ ಅಧ್ಯಕ್ಷ ಡಾ. ಕೆಎಂ ಮುನೀರ್ ಬಾವಾ ಅವರ ವಿಶೇಷ ಉಪಸ್ಥಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿಅತಿಥಿಗಳಾಗಿ ಉಳ್ಳಾಲ ನಗರಸಭೆಯ ಕೌನ್ಸಿಲರ್‌ಗಳಾದ ಅಸ್ಗರ್ ಅಲಿ ಮತ್ತು ಇಸ್ಮಾಯೀಲ್ ಯು.ಎ., ಮದನಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಹಾಜಿ ಯುಕೆ ಇಬ್ರಾಹೀಂ, ಮೇಲ್ತೆನೆಯ ಅಧ್ಯಕ್ಷ ಮನ್ಸೂರ್ ಅಹ್ಮದ್ ಸಾಮಣಿಗೆ, ಬ್ಯಾರಿ ಅಕಾಡಮಿಯ ಮಾಜಿ ಸದಸ್ಯ ಫಝಲ್ ಅಸೈಗೋಳಿ, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸದಸ್ಯ ಸಿರಾಜ್ ಮುಡಿಪು, ರಾಜ್ಯ ಹಜ್ ಕಮಿಟಿಯ ಸದಸ್ಯ ಹನೀಫ್ ನಿಝಾಮಿ ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭವನ್ನು ಶಾಸಕ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಉಳ್ಳಾಲ ನಗರಸಭೆಯ ಅಧ್ಯಕ್ಷೆ ಶ್ರೀಮತಿ ಚಿತ್ರಕಲಾ, ಉಪಾಧ್ಯಕ್ಷ ಅಯ್ಯೂಬ್ ಮಂಚಿಲ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ದಿ ಮೈಸೂರು ಇಂಡಸ್ಟ್ರೀಸ್ ಲಿ.ನ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ರಾಜ್ಯ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕಣಚೂರು ಮೋನು, ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿಯ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಉಳ್ಳಾಲ್, ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಮಂಗಳೂರು ವಿವಿ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್, ಅಧ್ಯಯನ ಪೀಠದ ಸಲಹಾ ಸಮಿತಿಯ ಸದಸ್ಯ ಇಬ್ರಾಹೀಂ ಕೋಡಿಜಾಲ್, ಮಂಗಳೂರು ವಿವಿ ಬ್ಯಾರಿ ಡಿಪ್ಲೊಮಾ ಕೋರ್ಸ್‌ನ ಸದಸ್ಯ ಕೆ.ಎಂ.ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಬ್ಯಾರಿ ಲಿಪಿ ರಚನೆ ಮತ್ತು ಸಂಶೋಧನಾ ಸಮಿತಿಯ ಸದಸ್ಯರಾದ ಡಾ. ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಹೈದರ್ ಅಲಿ ಕೀಲಾರಿ ಮತ್ತು ಎ.ಕೆ.ಕುಕ್ಕಿಲ, ಸಾಮಾಜಿಕ ಮುಖಂಡರಾದ ಹೈದರ್ ಪರ್ತಿಪ್ಪಾಡಿ, ನಝೀರ್ ಉಳ್ಳಾಲ್, ಫಾರೂಕ್ ಉಳ್ಳಾಲ್ ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ಎರಡು ಕವಿಗೋಷ್ಠಿ ಮತ್ತು ಎರಡು ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ, ಭಾಷಣ ಸ್ಪರ್ಧೆ, ಅಡುಗೆ ಸ್ಪರ್ಧೆ, ಮೆಹಂದಿ ಸ್ಪರ್ಧೆ ನಡೆಯಲಿದೆ. ಅಲ್ಲದೆ 15 ಮಂದಿ ಸಾಧಕರನ್ನು ಸನ್ಮಾನಿಸಲಾಗುತ್ತದೆ.

ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷ ಡಾ. ಕೆಎಂ ಮುನೀರ್ ಬಾವಾ, ಮೇಲ್ತೆನೆಯ ಅಧ್ಯಕ್ಷ ಮನ್ಸೂರ್ ಅಹ್ಮದ್ ಸಾಮಣಿಗೆ, ಬ್ಯಾರಿ ಅಕಾಡೆಮಿ ಸದಸ್ಯ ಶಂಶೀರ್ ಬುಡೋಳಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *