Header Ads
Header Ads
Breaking News

ಮಾ.9ರಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಂಗಳೂರಿಗೆ : ಮೋನಪ್ಪ ಭಂಡಾರಿ ಹೇಳಿಕೆ

ಮಾರ್ಚ್ 9ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮಂಗಳೂರಿಗೆ ಆಗಮಿಸಲಿದ್ದಾರೆ. ನಗರದ ಕೇಂದ್ರ ಮೈದಾನದಲ್ಲಿ ನಡೆಯುವ ಕಸ್ಟರ್ ಅಧೀನದ ಶಕ್ತಿ ಕೇಂದ್ರ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮುಖಂಡ ಮೋನಪ್ಪ ಭಂಡಾರಿ ಹೇಳಿದ್ದಾರೆ. ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡುವ ನಿಟ್ಟಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ , ಉಡುಪಿ, ಚಿಕ್ಕಮಗಳೂರು , ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯ ಆಯೋಜಿಸಿದ್ದು,ಸುಮಾರು 8 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

Related posts

Leave a Reply

Your email address will not be published. Required fields are marked *