Header Ads
Breaking News

ಮಿಥುನ್ ರೈ ಪರ ಪ್ರಚಾರಕ್ಕೆ ಆಗಮಿಸಿದ ಶಾಸಕ ಎನ್.ಎ.ಹ್ಯಾರಿಸ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರ ಪ್ರಚಾರಕ್ಕೆ ಮಂಗಳೂರಿಗೆ ಶಾಸಕ ಎನ್.ಎ. ಹ್ಯಾರಿಸ್ ಆಗಮಿಸಿದ್ದಾರೆ. ನಗರದ ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ ನಡೆಸಿದ ಶಾಸಕ ಹ್ಯಾರಿಸ್ ಅವರು, ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲು ಶ್ರಮಪಡಬೇಕು. ಕರಾವಳಿಯಲ್ಲಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಅಭ್ಯರ್ಥಿಯನ್ನು ಗೆಲುವು ಸಾಧಿಸಲು ಪ್ರಾಮಾಣಿಕ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು. ಇದೇ ವೇಳೆ ಜಿಲ್ಲಾ ವಕ್ತಾರ ಕಳ್ಳಿಗೆ ತಾರಾನಾಥ್ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ, ಇದರಿಂದಾಗಿ ನಮ್ಮ ಅಭ್ಯರ್ಥಿಯ ಗೆಲುವು ಸುಲಭವಾಗಲಿದೆ ಎಂದು ತಿಳಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತಿರಿದ್ರು.

Related posts

Leave a Reply

Your email address will not be published. Required fields are marked *