Header Ads
Breaking News

ಮೀಸಲಾತಿ ರದ್ದುಗೊಳಿಸುತ್ತಿರುವ ಕ್ರಮಕ್ಕೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಎಸ್.ಸಿ, ಎಸ್.ಟಿ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ರದ್ದುಗೊಳಿಸಲು ಮುಂದಾಗಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.

ಉಡುಪಿ ಅಜ್ಜರಕಾಡುವಿನ ಹುತಾತ್ಮರ ಸ್ಮಾರಕದ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ವಿರುದ್ದ ಘೋಷಣೆಗಳನ್ನು ಕೂಗಿದರು. ಎಸ್.ಸಿ, ಎಸ್.ಟಿ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ರದ್ದುಗೊಳಿಸಲು ಕೇಂದ್ರ ಮುಂದಾಗಿದೆ. ಈ ಮೂಲಕ ಕೇಂದ್ರ ಜನವಿರೋಧಿಯಾಗಿ ವರ್ತಿಸುತ್ತಿದ್ದು ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆಯನ್ನ ನಡೆಸುತ್ತಿದೆ. ಗ್ಯಾಸ್ ಸಿಲಿಂಡರ್ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು ಸಾವಿರದ ಗಡಿ ದಾಟುತ್ತಿದೆ. ಈ ಮೂಲಕ ಕೇಂದ್ರ ಸರಕರಾದ ಬಡ ಮಹಿಳೆಯರನ್ನು, ಮಾಧ್ಯಮ ವರ್ಗವನ್ನು ವಂಚಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

Related posts

Leave a Reply

Your email address will not be published. Required fields are marked *