Header Ads
Breaking News

ಕರಾವಳಿಯಲ್ಲಿ ಚುರುಕುಗೊಂಡ ಮಳೆ

ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲೂ ಮುಂಗಾರು ಮಳೆ ಚುರುಕುಗೊಂಡಿದ್ದು, ಮಂಗಳವಾರ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ಕಳೆದ ಕೆಲವು ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು ಮಳೆ ಬಿರುಸಾದ ಹಿನ್ನಲೆಯಲ್ಲಿ ಕೃಷಿ ಚಟುವಟಿಕೆಗಳು ಮತ್ತೆ ಜೀವ ಪಡೆದುಕೊಂಡಿವೆ. ಮಳೆಯಿಂದಾಗಿ ಮಂಗಳೂರಿನ ಹೊರವಲಯದ ಆಕಾಶಭವನದಲ್ಲಿ ಭೂಕುಸಿತ ಉಂಟಾಗಿ ಮನೆಗೆ ಹಾನಿಯಾಗಿದೆ. ಈ ನಡುವೆ ಪಡೀಲ್‌ನ ಅಂಡರ್ ಪಾಸ್‌ನಲ್ಲಿ ಮಳೆ ಸರಾಗವಾಗಿ ಹರಿದುಹೋಗದೇ ರಸ್ತೆಯಲ್ಲೇ ನಿಂತಿರುವುದರಿಂದ ವಾಹನ ಸವಾರರಿಗೆ ಸಮಸ್ಯೆ ಉಂಟಾಯಿತು. ಇನ್ನು ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಶಾಲಾ ಶೌಚಾಲಯ ಕಟ್ಟಡದ ಮೇಲೆ ಗಾಳಿಗೆ ಮರಬಿದ್ದು ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಸುಳ್ಯ ಪುತ್ತೂರು ಹಾಗೂ ಮೂಡಬಿದಿರೆ ಭಾಗಗಳಲ್ಲಿ ಗಾಳಿ ಸಹಿತ ಮಳೆ ಸುರಿಯುತ್ತಿದೆ. ಸುಮಾರು ಸಮಯದ ಬಳಿಕ ಬಿಡದೆ ಸುರಿಯುತ್ತಿರುವ ಮಳೆಯು ಕರಾವಳಿಗರಲ್ಲಿ ಅಲ್ಪ ಸಮಾಧಾನವನ್ನು ತಂದೊಡ್ಡಿದೆ.

Related posts

Leave a Reply

Your email address will not be published. Required fields are marked *