Header Ads
Breaking News

ಮುಂದಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪುತ್ತೂರು ಪ್ರಥಮ ಸ್ಥಾನ ನಿರೀಕ್ಷೆ : ಪುತ್ತೂರು ಶಿಕ್ಷಣಾಧಿಕಾರಿ ಲೋಕೇಶ್ ಸಿ ಹೇಳಿಕೆ

ಪುತ್ತೂರು: ಮುಂಬವರು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪುತ್ತೂರು ತಾಲೂಕು ಜಿಲ್ಲೆಗೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಮನೆ ಮನೆ ಭೇಟಿ ಕಾರ್ಯಕ್ರಮ ಸಹಿತ ಇನ್ನಿತರ ಪರೀಕ್ಷೆಗೆ ಪೂರಕ ಕಾರ್ಯಕ್ರಮಗಳನ್ನು ಈಗಾಗಲೇ ನಡೆಸಲಾಗಿದೆ ಎಂದು ತಾಲೂಕು ಶಿಕ್ಷಣಾಧಿಕಾರಿ ಲೋಕೇಶ್ ಸಿ. ತಿಳಿಸಿದ್ದಾರೆ.

ಪ್ರತ್ರಕರ್ತರಿಗೆ ಈ ಕುರಿತು ಮಾಹಿತಿ ನೀಡಿದ ಅವರು, ಕಳೆದ ಸಾಲಿನಲ್ಲಿ ಅಂದರೆ 2018-19ನೇ ಸಾಲಿನಲ್ಲಿ ಪುತ್ತೂರು ತಾಲೂಕು ಜಿಲ್ಲೆಯಲ್ಲಿ ನಾಲ್ಕನೇ ಸ್ಥಾನ ಪಡೆದಿದೆ. ಮುಂಬವರು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕಿನ ಶಾಲೆಗಳಿಗೆ ಈಗಾಗಲೇ ಭೇಟಿ ನೀಡಿ ಸಹಶಿಕ್ಷಕರ ಸಭೆ ನಡೆಸಿ ವಿದ್ಯಾರ್ಥಿಗಳ ಜತೆ ಶೈಕ್ಷಣಿಕ ಸಂವಾದದೊಂದಿಗೆ ಪರೀಕ್ಷೆಯನ್ನು ಸುಲಭವಾಗಿ ಎದುರಿಸುವ ಬಗ್ಗೆ ಸಲಹೆ ನೀಡಲಾಗಿದೆ ಎಂದರು.

ತಾಲೂಕಿನಿಂದ ಈ ಬಾರಿ ಸರಕಾರಿ, ಅನುದಾನಿತ, ಸನುದಾನರಹಿತ ಹಾಗೂ ಮೋರಾರ್ಜಿ ದೇಸಾಯಿ ಸಹಿತ 78 ಶಾಲೆಗಳ ಸುಮಾರು 4786 ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯಲಿದ್ದಾರೆ. ಈ ಪೈಕಿ 2413 ವಿದ್ಯಾರ್ಥಿಗಳು, 2373 ವಿದ್ಯಾರ್ಥಿನಿಯರು ಸೇರಿದ್ದಾರೆ. ಈಲ್ಲೆಯಲ್ಲಿ ಒಂದನೇ ಸ್ಥಾನ ಬರಲು ಪರೀಕ್ಷೆಗೆ ಪೂರಕ ವಾತಾವರಣ ಉಂಟು ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಸಹಕಾರದೊಂದಿಗೆ ಶಾಸಕರ ಅಧ್ಯಕ್ಷತೆಯಲ್ಲಿ ಮುಖ್ಯ ಶಿಕ್ಷಕರ ಸಭೆಯನ್ನು ಜುಲೈ ತಿಂಗಳಲ್ಲಿ ನಡೆಸಲಾಗಿದೆ. ಅಲ್ಲದೆ ಹಿಂದುಳಿದ ಎಸ್‍ಸಿ, ಎಸ್‍ಟಿ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ ಪ್ರತಿಯೊಬ್ಬರು ಉತ್ತೀರ್ಣರಾಗುವಂತೆ ನೋಡಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ ಎಂದರು.

ತಾಲೂಕಿನಲ್ಲಿ ಕಳೆದ ಸಾಲಿನಲ್ಲಿ ಸುಮಾರು 600 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಈ ಸಂಖ್ಯೆಯನ್ನು ಕಡಿಮೆ ಮಾಡುವ ಉದ್ದೇಶ ಹೊಂದಲಾಗಿದೆ. ಗಣಿತ, ವಿಜ್ಞಾನ, ಸಮಾಜ ವಿಷಯಗಳಿಗೆ ಸಂಬಂಧಿಸಿದಂತೆ ಉತ್ತೀರ್ಣರಾಗಲು ಮಾದರಿ ಪತ್ರಿಕೆಯನ್ನು ಉಚಿತವಾಗಿ ವಿತರಿಸಲಾಗಿದೆ, 300 ಮಂದಿ ಭಾಷಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ, ಗಣಿತ, ವಿಜ್ಞಾನ, ಸಮಾಜ ಶಿಕ್ಷಕರ ಸಭೆ ನಡೆಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *