Header Ads
Breaking News

ಮುಂದಿನ ದಿನಗಳಲ್ಲಿ ಯುವವಾಹಿನಿಗೆ ಸಹಕಾರ : ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಡಿ.ಆರ್. ರಾಜು

ಯುವಕರಿಗೆ ಆದ್ಯತೆ ನೀಡಿ ಯುವವಾಹಿನಿ ಘಟಕದಿಂದ ಉತ್ತಮ ಕಾರ್ಯಗಳಾಗುತ್ತಿರುವುದು ಸಂತಸದ ವಿಚಾರ. ಮುಂದಿನ ದಿನಗಳಲ್ಲಿ ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಯವವಾಹಿನಿ ಕಾರ್ಯಕ್ರಮಗಳಿಗೆ ಸಹಕಾರ ನೀಡಲಾಗುವುದು ಎಂದು ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಡಿ.ಆರ್. ರಾಜು ಹೇಳಿದರು.

ಅವರು. ಪೆರ್ವಾಜೆ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿಯ ೩೪ನೇ ಘಟಕ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಸುವರ್ಣ ಮಾತನಾಡಿ, ನಾರಾಯಣ ಗುರುಗಳ ಆಶಯವನ್ನು ಈಡೇರಿಸುವಲ್ಲಿ ಯುವವಾಹಿನಿಯು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಯುವಕರಲ್ಲಿ ನಾಯಕತ್ವ ಗುಣ ಮೂಡಿಸುವ ಮೂಲಕ ಯುವವಾಹಿನಿ ಬಿಲ್ಲವರ ಜೆಸಿಯಾಗಿ ಗುರುತಿಸಿಕೊಂಡಿದೆ ಎಂದರು.

ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಟಿ. ಶಂಕರ್ ಸುವರ್ಣ, ಸಂಘಟನಾ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *