Header Ads
Breaking News

ಮುಂದಿನ 4ವರ್ಷಗಳಲ್ಲಿ ರಾಮಮಂದಿರ ಪೂರ್ಣಗೊಳ್ಳುವ ಸಾಧ್ಯತೆ : ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿಕೆ

 ಮುಂಬರುವ ರಾಮೋತ್ಸವದ ಸಂದರ್ಭ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿ ಆರಂಭವಾಗಬೇಕೆಂಬುದು ನಮ್ಮ ಆಶಯವಾಗಿದ್ದು, ಈ ಆಶಯ ನೆರವೇರುವ ನಿರೀಕ್ಷೆ ಇದೆ ಎಂದು ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ರು.

ಅವರು ಮಂಗಳೂರಿನ ಸಂಘನಿಕೇತನದಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ವಿಶ್ವಸ್ತ ಮಂಡಳಿ, ಪ್ರಬಂಧ ಸಮಿತಿಯ ಸಂಯುಕ್ತ ಅಂತಾರಾಷ್ಟ್ರೀಯ ಮಟ್ಟದ ಬೈಠಕ್ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ರು. ಎಪ್ರಿಲ್‌ನಲ್ಲಿ ನಡೆಯುವ ರಾಮೋತ್ಸವ ವೇಳೆಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆರಂಭವಾಗಲಿದೆ ಎಂದು ಹೇಳಿದ್ರು. ಇನ್ನು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಸಂಕಲ್ಪದ ಹಿಂದೆ ದೊಡ್ಡ ಶಕ್ತಿಯಾಗಿ ಇದ್ದವರು ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಎಂದು ಅಲೋಕ್ ಕುಮಾರ್ ಪೇಜಾವರ ಶ್ರೀಗಳನ್ನು ಸ್ಮರಿಸಿದ್ರು ಬೈಠಕ್‌ನಲ್ಲಿ ಪೇಜಾವರ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಿ ಕಾರ್ಯಕ್ರಮ ಮುಂದುವರಿಸಲಾಯಿತು.

ಈ ಸಂದರ್ಭ ವಿ.ಹಿಂ.ಪ ರಾಷ್ಟ್ರೀಯ ಸಹ ಪ್ರಧಾನ ಕಾರ್ಯದರ್ಶಿ ಡಾ ಸುರೇಂದ್ರ ಕುಮಾರ್ ಜೈನ್, ವಿಜಯ್ ಶಂಕರ್ ತಿವಾರಿ, ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *