Header Ads
Breaking News

ಮುಕ್ಕ ಚರ್ಚ್‌ನಲ್ಲಿ ನಡೆದ ಪರಿಸರ ದಿನಾಚರಣೆ

ಮುಕ್ಕದ ಚರ್ಚ್ ವಠಾರದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಥೊಲಿಕ್ ಸಭಾ ಮಂಗಳೂರು ಪ್ರದೇಶ, ಸುರತ್ಕಲ್ ವಲಯ ಮತ್ತು ಘಟಕಗಳ ವತಿಯಿಂದ ಪರಿಸರ ಜಾಗೃತಿ ಅಭಿಯಾನ-2019 ಪ್ರಯುಕ್ತ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮಂಗಳೂರು ಧರ್ಮಪ್ರಾಂತ್ಯ ಶ್ರೇಷ್ಠ ಗುರು ಮ್ಯಾಕ್ಸಿಂ ಎಲ್. ನೊರೊನ್ಹಾ ಅಶೀರ್ವಚನಗೈದರು. ಮುಖ್ಯ ಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ ಗೀಡ ನೆಡುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಂಗಳೂರು ಉತ್ತರ ಕ್ಷೇತ್ರ ಶಾಸಕ ಡಾ.ವೈ ಭರತ್ ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ನ್ನಿಗೋಳಿ ವಲಯ ಅರಣ್ಯಾಧಿಕಾರಿ ಕೆ.ಸಿ ಮ್ಯಾಥ್ಯು ಪರಿಸರ ಸಂರಕ್ಷಣೆ ಮತ್ತು ಮಳೆ ನೀರು ಇಂಗಿಸುವಿಕೆ ಬಗ್ಗೆ ಮಾಹಿತಿ ನೀಡಿದರು.
ಕಥೋಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕ ಮ್ಯಾಥ್ಯು ವಾಸ್, ಸುರತ್ಕಲ್ ವಲಯದ ಪಾವ್ಲ್ ಪಿಂಟೊ, ಅಧ್ಯಾತ್ಮಿಕ ನಿರ್ದೇಶಕ ಸಿರಿಲ್ ಪಿಂಟೊ, ಮಂಗಳೂರು ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್, ಮುಕ್ಕ ಚರ್ಚ್ ಸಮಿತಿಯ ಉಪಾಧ್ಯಕ್ಷ ರೋಶನ್ ಡಿಸೋಜ ಉಪಸ್ಥಿತರಿದರು.

Related posts

Leave a Reply

Your email address will not be published. Required fields are marked *