Header Ads
Header Ads
Breaking News

ಮುಕ್ತ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟನಾ ಸಭೆ : ಸುಳ್ಯದ ಎಪಿಎಂಸಿ ಕಚೇರಿಯಲ್ಲಿ ನಡೆದ ಸಭೆ

ಕರ್ಣಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಸುಳ್ಯ ತಾಲೂಕು ಘಟಕದ ವತಿಯಿಂದ ಕೇಂದ್ರ ಸರ್ಕಾರದ ಮುಕ್ತ ಮಾರುಕಟ್ಟೆ ಒಪ್ಪಂದಗಳು ಮತ್ತು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಆರ್‌ಸಿಇಪಿ ವಿರುದ್ಧ ರೈತ ಸಂಘ ರಾಜ್ಯ ಕಾರ್ಯದರ್ಶಿ ಶ್ರೀ ರವಿಕಿರಣ ಪುಣಚ ವಿಚಾರ ಮಂಡಿಸಿ ರೈತ ವಿರೋಧಿ ನೀತಿಯನ್ನು ಖಂಡಿಸಿದರು. ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಮಗ್ರ ಆರ್ಥಿಕ ಶಹಭಾಗಿತ್ವ ಆರ್‌ಸಿಇಪಿ ಯನ್ನು ವಿರೋಧಿಸುವ ನಿರ್ಣಯಕ್ಕೆ ಸರ್ವಾನುಮತದಿಂದ ಎಲ್ಲ ರೈತರು ಒಪ್ಪಿಗೆ ಸೂಚಿಸಿದರು.  ಈ ನಿರ್ಣಯದ ಪ್ರತಿಯನ್ನು ಮಾನ್ಯ ಸುಳ್ಯದ ತಹಸೀಲ್ದಾರರ ಮೂಲಕ ಜಿಲ್ಲಾಧಿಖಾರಿಗಳಿಗೆ ಹಾಗು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಮುಖ್ಯ ಮಂತ್ರಿಗಳಿಗೂ ಹಾಗು ಪ್ರಧಾನಮಂತ್ರಿಗಳಿಗೂ ತಲುಪಿಸಲಾಗುವುದು ಎಂದು ತಿಳಿಸಿದರು .ಈ ಬಗ್ಗೆ ದೇಶದ ಆದ್ಯಂತ ೨೨೪ ರೈತ ಸಂಘಟನೆಗಳು ಈ ಒಪ್ಪಂದದ ವಿರೋಧಿಸಿ ಹೋರಾಟ ನಡೆಸುತ್ತಿವೆ ಎಂದು ರವಿಕಿರಣ ಪುಣಚ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ರೈತ ಸಂಘ ಸುಳ್ಯದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು,ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು, ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ ,ಉಪಾಧ್ಯಕ್ಷರಾದ ಮುರಳೀಧರ ಅಡ್ಕಾರು, ಖಜಾಂಜಿ ದೇವಪ್ಪ ಕುಂದಲ್ಪಾಡಿ, ವಲಯ ಅದ್ಯಕ್ಷರು ಲೋಕಯ್ಯ ಅತ್ಯಾಡಿ, ತೀರ್ಥರಮ ಉಳುವಾರು ಮತ್ತು ಹಲವಾರು ಗ್ರಾಮಗಳ ರೈತರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *