Header Ads
Header Ads
Breaking News

ಮುಖ್ಯಮಂತ್ರಿಯಾಗಿ ಬಿಎಸ್‌ವೈ ಪ್ರಮಾಣವಚನ ಪ್ರತಿಜ್ಞಾವಿಧಿ ಬೋಧಿಸಿದ ರಾಜ್ಯಪಾಲ ವಿ.ಆರ್. ವಾಲಾ ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ವಿರೋಧದ ನಡುವೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕದನೂತನಮೂಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಬೆಂಗಳೂರಿನ ರಾಜಭವನದ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ಬಿಎಸ್ ವೈ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅವರು ಬಿಎಸ್ ವೈಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರೈತರು ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಆ ಮೂಲಕ ಬಿಎಸ್ ವೈ ಮೂರನೇ ಬಾರಿಗೆ ಮತ್ತು ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಬಿಎಸ್ ವೈ ಪದಗ್ರಹಣ ಮಾಡಿದ್ದಾರೆ. ಈ ವೇಳೆ ರಾಜಭವನದ ಆವರಣದಲ್ಲಿ ಮತ್ತು ರಾಜನಭವನದ ಹೊರಗೆ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರು ಬಿಎಸ್ ವೈ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಕೂಗಿದರು.
ಇನ್ನು ಪ್ರತಿಜ್ಞಾ ವಿಧಿ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಅನಂತ್ ಕುಮಾರ್, ಡಿವಿ ಸದಾನಂದಗೌಡ, ರಾಜ್ಯ ನಾಯಕರಾದ ಕೆಎಸ್ ಈಶ್ವರಪ್ಪ, ಕಟ್ಟಾ ಸುಬ್ರಮಣ್ಯ ನಾಯ್ಡು ಸೇರಿದಂತೆ ಬಿಜೆಪಿ ಹಲವು ಗಣ್ಯ ನಾಯಕರು ಉಪಸ್ಥಿತರಿದ್ದರು.

Related posts

Leave a Reply