Header Ads
Header Ads
Breaking News

ಮುಖ್ಯಮಂತ್ರಿ ಸಿದ್ದರಾಮಯ್ಯ ಜ.7 ರಂದು ಪುತ್ತೂರಿಗೆ 66.86 ಕೋಟಿ ರೂ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಪುತ್ತೂರಿನಲ್ಲಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿಕೆ

ಪುತ್ತೂರು ವಿಧಾನ ಸಭಾ ಕ್ಷೇತ್ರದ ಸುಮಾರು 25 ಕ್ಕೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಜನವರಿ 7 ರಂದು ಪುತ್ತೂರಿಗೆ ಆಗಮಿಸಲಿದ್ದಾರೆ ಎಂದು ಶಾಸಕಿ ಶಕುಂತಳಾ ಟಿ ಶೆಟ್ಟಿ ತಿಳಿಸಿದರು.

ಅವರು ಪುತ್ತೂರಲ್ಲಿ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳು, ರಾಜ್ಯದ ಅಭಿವೃದ್ಧಿ ಕೆಲಸಗಳು ಹಾಗೂ ಪುತ್ತೂರಿನ ನೂತನ ಬೇಡಿಕೆಗಳ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಲಿದ್ದಾರೆ ಎಂದವರು ಹೇಳಿದರು.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 6500 ಮಂದಿಗೆ 94ಸಿ/ 94 ಸಿಸಿ ಹಕ್ಕುಪತ್ರ ನೀಡಲಾಗಿದೆ. 4 ಸಾವಿರ ಕುಟುಂಬಗಳಿಗೆ ಅಕ್ರಮಸಕ್ರಮ ಯೋಜನೆಯಡಿಯಲ್ಲಿ ಆಕ್ರಮಿತ ಸ್ಥಳ ಮಂಜೂರು ಮಾಡಲಾಗಿದೆ. 700 ಗಂಗಾ ಕಲ್ಯಾಣ ಯೋಜನೆ,ಅನ್ನಭಾಗ್ಯ, ಸುಮಾರು 74 ವಾಹನ ನೀಡಿಕೆ ಸೇರಿದಂತೆ ಸುಮಾರು 15 ಸಾವಿರ ಮಂದಿಗೆ ವೈಯುಕ್ತಿಕ ಪ್ರಯೋಜನವನ್ನು ನೀಡಲಾಗಿದೆ ಎಂದು ಶಕುಂತಳಾ ಶೆಟ್ಟಿ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಬಡಗನ್ನೂರು, ಜಿಲ್ಲಾ ಕಾಂಗ್ರೇಸ್ ಮುಖಂಡ ರಮಾನಾಥ ವಿಟ್ಲ, ಉಪಸ್ಥಿತರಿದ್ದರು.

Related posts