Header Ads
Breaking News

ಮುಡಿಪು ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆ : ಖರ್ಚಿನ ರೂಪುರೇಷೆಯನ್ನು ವೀಕ್ಷಿಸಿದ ಸಚಿವ ಯುಟಿ ಖಾದರ್

ಮುಡಿಪು ಗೋಪಾಲಕೃಷ್ಣ ದೇವಸ್ಥಾನದಿಂದ ಜಂಕ್ಷನ್‌ವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಆಗಬಹುದಾದ ಖರ್ಚಿನ ರೂಪುರೇಷೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ವೀಕ್ಷಿಸಿದರು.
ನಂತರ ಮಾತನಾಡಿದ ಸಚಿವ ಯು.ಟಿ ಖಾದರ್ ರಸ್ತೆ ಅಗಲೀಕರಣ ಕಾಮಗಾರಿಗೆ ಮುಡಿಪು ಹೋಬಳಿಯಾದರೂ ಅತ್ಯಂತ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶವಾಗಿದ್ದು ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮಾದರಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. 
ಈ ಸಂದರ್ಭ ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸದಸ್ಯ ಹೈದರ್ ಕೈರಂಗಳ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಗಟ್ಟಿ, ಮುಡಿಪು ಬ್ಲಾಕ್ ಅಧ್ಯಕ್ಷ ಪ್ರಶಾಂತ ಕಾಜವ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *