Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಮೂಡಬಿದರೆಗೆ ಮುಖ್ಯಮಂತ್ರಿ ಭೇಟಿ ಹಿನ್ನೆಲೆ: ದ.ಕ. ಜಿಲ್ಲಾಧಿಕಾರಿಗಳಿಂದ ಸಮಾಲೋಚನೆ

ಮೂಡುಬಿದಿರೆ: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನವರಿ ೭ರಂದು ಮೂಡುಬಿದಿರೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಮುಖ್ಯಮಂತ್ರಿಗಳು ಭಾನುವಾರ ಸಂಜೆ ಮೂಡುಬಿದಿರೆಗೆ ಆಗಮಿಸುತ್ತಿರುವುದರಿಂದ ಬೆಳಕು, ವೇದಿಕೆ, ಆಸನಗಳು, ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ಗೊಂದಲಗಳಾಗದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಫಲಾನುಭವಿಗಳು, ಅಗತ್ಯವಿರುವ ಶಾಲಾ ಮಕ್ಕಳು ಹೀಗೆ ವಿವಿಧ ಯೋಜನೆಗಳಿಗೆ ಸಂಬಂಧಿಸಿದವರು ಕಾರ್ಯಕ್ರಮದಲ್ಲಿ ಹಾಜರಿರುವಂತೆ ನೋಡಿಕೊಳ್ಳಬೇಕು ಎಂದ ಜಿಲ್ಲಾಧಿಕಾರಿಯವರು ಮೂರು ದಿನಗಳ ಬಳಿಕ ಮತ್ತೆ ಆಗಮಿಸಿ ಅಂತಿಮ ಹಂತದ ಪರಿಶೀಲನೆಯನ್ನು ನಡೆಸುವುದಾಗಿ ಸೂಚಿಸಿದರು.

ಇದೇ ವೇಳೆಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಸಿಎಂ ಭೇಟಿಯ ಹಿನ್ನೆಲೆಯಲ್ಲಿ ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆಯಲ್ಲಿ ಸ್ಥಳ ಪರಿಶೀಲನೆ ಮಾಡಿದ್ದು ಸಿದ್ಧತೆಗಳು ಉತ್ತಮವಾಗಿದೆ. ಮೂಡುಬಿದಿರೆ ದಕ ಜಿಲ್ಲೆಯ ಹೆಮ್ಮೆಯಾಗಿದ್ದು ಇಲ್ಲಿನ ಪರಂಪರೆಯ ನೆಲವನ್ನು ಅಭಿವೃದ್ಧಿಪಡಿಸುವ ಅವಕಾಶಗಳಿವೆ. ಜತೆಗೆ ಒಂದಷ್ಟು ಸಮಸ್ಯೆಗಳು, ತಾಲೂಕು ಕೇಂದ್ರವಾಗುತ್ತಿರುವ ಕಾರಣಕ್ಕಾಗಿ ಮೂಲ ಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ತ್ವರಿತ ಕೆಲಸಗಳಾಗುವಂತೆ ಪ್ರಯತ್ನ ಮಾಡಲಾಗುವುದು ಎಂದರು.

ಪ್ರೊಬೆಶನರಿ ಅಪರ ಜಿಲ್ಲಾಧಿಕಾರಿ ಕುಮಾರ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್, ಸಹಾಯಕ ಕಮಿಷನರ್ ರೇಣುಕಾ ಪ್ರಸಾದ್, ಯೋಜನಾ ನಿರ್ದೇಶಕ ಪ್ರಸನ್ನ ಕುಮಾರ್, ತಹಸೀಲ್ದಾರ್ ಮಹಮ್ಮದ್ ಇಸಾಕ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಪ್ರೇಮಶ್ರೀ ಮೂಡಬಿದರೆ

Related posts

Leave a Reply