Header Ads
Header Ads
Breaking News

ಮೂಡಬಿದರೆಯ ಜೈನ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಮೂಡುಬಿದಿರೆಯ ಜೈನ ಪ.ಪೂ. ಕಾಲೇಜಿನ ರಾಷ್ಟ್ರೀಯ ಸ್ವಯಂ ಸೇವಾ ಘಟಕ ಮತ್ತು ಇವುಗಳ ಸಹಯೋಗದಲ್ಲಿ ಜೈನ ಪ.ಪೂ. ಕಾಲೇಜಿನ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ನಡೆಯಿತು.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ನಂದಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿ ಯೌವನದ ಆವೇಶದಲ್ಲಿ ಯುವಜನರು ದುಶ್ಚಟಗಳಿಗೆ ಬಲಿಯಾಗುವ ಮೂಲಕ ತಾವೂ ಕೆಡುವುದಲ್ಲದೆ ತಮ್ಮ ಪರಿವಾರ, ಸಮಾಜದ ಆರೋಗ್ಯವನ್ನು ಹಾಳುಗೆಡಹುತ್ತಾರೆ.

ಇದನ್ನು ನಿವಾರಿಸಲು ಯುವಜನರಿಗೆ ಯೋಗ್ಯ ಮಾರ್ಗದರ್ಶನ ನೀಡಬೇಕಾಗಿದೆ ಎಂದರು.ಜೈನ ಪ.ಪೂ. ಕಾಲೇಜಿನ ಪ್ರಾಚಾರ್ಯ ಮಧುಕರ ಸಾಲಿನ್ಸ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪುತ್ತಿಗೆ ವಲಯಾಧ್ಯಕ್ಷ ದಿನೇಶ್ ಕುಮಾರ್ ಆನಡ್ಕ, ಶಿರ್ತಾಡಿ ವಲಯಾಧ್ಯಕ್ಷ ಸುಭಾಶ್ಚಂದ್ರ ಚೌಟ, ಮೂಡುಬಿದಿರೆ ವಲಯಾಧ್ಯಕ್ಷ ಜೊಸ್ಸಿ ಮಿನೇಜಸ್ ಭಾಗವಹಿಸಿದ್ದರು.

Related posts

Leave a Reply