Header Ads
Header Ads
Breaking News

ಮೂಡುಬಿದರೆಯ ಕಲ್ಲಬೆಟ್ಟು ಶಾಲೆಯಲ್ಲಿ ವಾರ್ಷಿಕೋತ್ಸವ : ಸಾಧಕ ವಿದ್ಯಾರ್ಥಿಗಳಿಗೆ, ಶಾಲಾಭಿವೃದ್ಧಿಗೆ ಶ್ರಮಿಸಿದವರಿಗೆ ಸನ್ಮಾನ

ದ.ಕ.ಜಿ.ಪಂ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಲ್ಲಬೆಟ್ಟು ಇದರ ವಾರ್ಷಿಕೋತ್ಸವವು ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭನೆಯಿಂದ ನಡೆಯಿತು.

ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜೀವನವೆಂದರೆ 100ಮೊದಲಿಗರು ಆದ್ದರಿಂದ ಇಂತಹ ವಿಷಯಗಳನ್ನು ಮಕ್ಕಳಿಗೆ ಹೇಳಿಕೊಟ್ಟು ಜಾಗೃತಿ ಮೂಡಿಸಬೇಕಾಗಿದೆ ಎಂದು ಹೇಳಿದರು.

ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ ವಾರ್ಷಿಕೋತ್ಸವವೆಂದರೆ ವಿದ್ಯಾರ್ಥಿಗಳು ಸಂಭ್ರಮಿಸುವ ಹಬ್ಬದ ದಿನ. ವರ್ಷವಿಡೀ ಶಾಲೆಯ ಪಠ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆಯುವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶ ಸಿಗುವ ಅವಕಾಶ ಹಾಗೂ ಶಾಲಾ ಸಮವಸ್ತ್ರದಿಂದ ಮುಕ್ತಿ ಪಡೆದು ಬಣ್ಣ ಬಣ್ಣದ ಬಟ್ಟೆಗಳನ್ನು ಧರಿಸಿ ಹಬ್ಬದ ವಾತಾವರಣವನ್ನು ಬಿಂಬಿಸುವ ದಿನವಾಗಿದೆ ಎಂದು ಹೇಳಿದರು.


ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿಶೇಷ ವಿದ್ಯಾರ್ಥಿಗಳಾದ ಪ್ರೀತಮ್ ಮತ್ತು ತುಷಾರ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿರುವ ಅಪರ್ಣಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.


ಪುರಸಭಾ ಸದಸ್ಯೆ ಆಶಾ, ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ, ಉದ್ಯಮಿಗಳಾದ ಕೆ.ಶ್ರೀಪತಿ ಭಟ್, ಐ.ರಾಘವೇಂದ್ರ ಪ್ರಭು, ಶ್ರೀಧರ್ ರಾವ್, ಜೊಸ್ಸಿ ಮಿನೇಜಸ್, ದಿನೇಶ್ ಶೆಟ್ಟಿ, ದಾನಿ ಶಾರದಾದೇವಿ, ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ನಾಗೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಆಚಾರ್ಯ, ವಿದ್ಯಾರ್ಥಿ ನಾಯಕಿ ಅಫ್ರೀನಾ ಬಾನು ಉಪಸ್ಥಿತರಿದ್ದರು.

Related posts

Leave a Reply