Header Ads
Breaking News

ಹಾಥರಸ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣ-ಯೋಗಿ ಸರ್ಕಾರದ ವೈಫಲ್ಯ ಮಾಜಿ ಸಚಿವ ಅಭಯಚಂದ್ರ ಜೈನ್

ಮೂಡುಬಿದಿರೆ: ಹಾಥರಸ್‌ನ ಯುವತಿಯ ಅತ್ಯಾಚಾರ, ನಿಗೂಡ ಸಾವಿನ ಪ್ರಕರಣದಲ್ಲಿ ಪೊಲೀಸ್ ಇಲಾಖೆಯು ಅಮಾನವೀಯವಾಗಿ ನಡೆದುಕೊಂಡಿದೆ. ಉತ್ತರ ಪ್ರದೇಶದ ಜನರು, ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ಮೇಲೆ ಭರವಸೆ ಇಟ್ಟು ಅಧಿಕಾರಕ್ಕೆ ತಂದಿದ್ದಾರೆ. ಅತ್ಯಾಚಾರ ಸಹಿತ ಹೀನ ಕೃತ್ಯಗಳು ಉತ್ತರ ಪ್ರದೇಶದಲ್ಲಿ ಹೆಚ್ಚಾಗುತ್ತಿವೆ. ಹಾಥರಸ್ ಪ್ರಕರಣದಲ್ಲಿ ಅಲ್ಲಿನ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಆರೋಪಿಸಿದರು.
ಅವರು ಮೂಡುಬಿದಿರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದರು. ಯುವತಿಯ ಮನೆಯವರಿಗೆ ಅಂತಿಮದರ್ಶನವನ್ನು ಮಾಡಲು ಅವಕಾಶ ಮಾಡಿಕೊಡದಿರುವುದು ತಪ್ಪು. ಇಂತಹ ಪ್ರಕರಣಗಳು ಆಗುವ ಸಂದರ್ಭದಲ್ಲಿ ಯೋಗಿ ಸರ್ಕಾರದ ಇಂತಹ ನಡೆಯ ವಿರುದ್ಧ ಉಗ್ರ ಪ್ರತಿಭಟನೆ ಅನಿವಾರ್ಯ ಎಂದರು. ಸುದ್ದಿಗೋಷ್ಠಿಯಲ್ಲಿ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *