Header Ads
Header Ads
Breaking News

ಮೂಡಬಿದಿರೆ ಲಾಡಿ ಹಜಂಕಾಲಬೆಟ್ಟ ದೈವಸ್ಥಾನದ ಆವರಣದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಾರ್ಕಳ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಲಾಡಿ ಮೂಡುಬಿದಿರೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಲಾಡಿ ಹಜಂಕಾಲಬೆಟ್ಟ ದೈವಸ್ಥಾನದ ಆವರಣದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ ನಡೆಯಿತು.

ಕಾರ್ಯಕ್ರಮವನ್ನು ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್‌ರವರು ಉದ್ಘಾಟಿಸಿದರು.
ಈ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಅವರ ಸೂಚನೆಯಂತೆ ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಯೋಜನೆಯ ಪರವಾಗಿ ಸನ್ಮಾನಿಸಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಪುರುಷೋತ್ತಮ ಪಿ.ಕೆ, ಕಾರ್ಕಳ ತಾಲೂಕು ಯೋಜನಾಧಿಕಾರಿ ಕೃಷ್ಣ ಟಿ., ಪ್ರಗತಿಬಂಧು ಸ್ವ.ಸಹಾಯ ಸಂಘಗಳ ಒಕ್ಕೂಟದ ಮೂಡುಬಿದಿರೆ ವಲಯಾಧ್ಯಕ್ಷ ಸತೀಶ್ ಕೋಟ್ಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Related posts

Leave a Reply