Header Ads
Header Ads
Breaking News

ಮೂಡಬಿದಿರೆ ಸಮಾಜ ಮಂದಿರದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ ಮತ್ತು ಪರಿಸರ ನಿರ್ಮಾಣ ಕಾರ್ಯಕ್ರಮ

ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಸಮಾಜ ಮಂದಿರದಲ್ಲಿ “ವಿಶ್ವ ಅಂಗವಿಕಲರ ದಿನಾಚರಣೆ ಮತ್ತು ಪರಿಸರ ನಿರ್ಮಾಣ ಕಾರ್ಯಕ್ರಮ”ವು ನಡೆಯಿತು.

ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕೆಲವರು ಹುಟ್ಟುವಾಗಲೇ ವಿಶೇಷ ಚೇತನರಾದರೆ ಇನ್ನು ಕೆಲವರು ತಮ್ಮ ಜೀವನದಲ್ಲಿ ನಡೆಯುವ ಕೆಲವು ಘಟನೆಗಳಿಂದ ವಿಶೇಷ ಚೇತನರಾಗುತ್ತಾರೆ. ಇಂತಹ ಸಂದರ್ಭದಲ್ಲಿ ಹೆತ್ತವರು ಮತ್ತು ಸಮಾಜವು ಅವರಲ್ಲಿ ಆತ್ಮಸ್ಥೈರ್ಯ ಮತ್ತು ಆತ್ಮವಿಶ್ವಾಸವನ್ನು ತುಂಬಿಸಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳುವಂತೆ ಮಾಡುವ ಜವಾಬ್ದಾರಿಯಿದೆ ಎಂದರು.

ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿಕಲಚೇತನರಾಗಿ ಹುಟ್ಟುವುದು ಮಕ್ಕಳ ತಪ್ಪಲ್ಲ. ಮಕ್ಕಳಲ್ಲಿ ಧೈರ್ಯ ತುಂಬಿ ಸಂತೋಷದಿಂದ ಪೋಷಿಸುವುದು ನಮ್ಮ ಕರ್ತವ್ಯ. ಅವರ ಆಸಕ್ತಿಯ ಕ್ಷೇತ್ರಗಳಿಗೆ ನಾವು ಅವರನ್ನು ಸಜ್ಜುಗೊಳಿಸಬೇಕಾಗಿದೆ ಎಂದರು.

ಈ ಸಂದರ್ಭ ವಿದ್ಯುತ್ ಅವಘಡದಿಂದ ಕೈಯನ್ನು ಕಳೆದುಕೊಂಡು ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಗಣೇಶ್ ಕಾಮತ್ ಅವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾದೇವ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್ ಭಟ್ ಅತಿಥಿಗಳಾಗಿ ಭಾಗವಹಿಸಿದ್ದರು. ಸಮನ್ವಂii ಶಿಕ್ಷಣದ ತಾಲೂಕು ಸಮನ್ವಯಾಧಿಕಾರಿ ಸುಚಿತ್ರ ಗೋನ್ಸಾಲಿಸ್, ಬಿಐಇಆರ್‌ಟಿ ನಿಶಾ, ಶರ್ಮಿಳಾ, ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ, ಬಿಐಇಆರ್‌ಟಿ ರೋಬರ್ಟ್, ಸುಶೀಲಾ ಹೆಗ್ಡೆ, ಬಿಆರ್‌ಸಿ ಗೀತಾ ಉಪಸ್ಥಿತರಿದ್ದರು.

Related posts

Leave a Reply