Header Ads
Breaking News

ಮೂಡಬಿದ್ರೆಯ ಜೈನ್ ಪೇಟೆಯಲ್ಲಿ ನೂತನ ಅಂಗನವಾಡಿ ಕೇಂದ್ರ ಉದ್ಘಾಟನೆ

ದ.ಕ.ಜಿ.ಪಂ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು, ಪುರಸಭೆ ಮೂಡುಬಿದಿರೆ ಹಾಗೂ ದಿಗಂಬರ ಜೈನ ವಿದ್ಯಾವರ್ಧಕ ಸಂಘ(ರಿ) ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಜೈನ್ ಪೇಟೆಯಲ್ಲಿ ನೂತನ ಅಂಗನವಾಡಿ ಕೇಂದ್ರ ಉದ್ಘಾಟನೆಗೊಂಡಿತು. ಶಾಸಕ ಉಮಾನಾಥ ಕೋಟ್ಯಾನ್ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ಸಂಸ್ಕೃತಿ ಮತ್ತು ಸಾಂಪ್ರಾದಾಯಗಳು ಅಂಗನವಾಡಿ ಕೇಂದ್ರಗಳಲ್ಲಿ ಸಿಗುತ್ತದೆ. ಪುಟ್ಟ ಪುಟ್ಟ ಮಕ್ಕಳಲ್ಲಿ ವಿವಿಧ ರೀತಿಯಲ್ಲಿರುತ್ತಾರೆ. ಕೆಲವು ಮಕ್ಕಳು ತುಂಟತನದಿಂದ ಕೂಡಿದ್ದರೆ ಇನ್ನು ಕೆಲವು ಮಕ್ಕಳು ಮೌನವಾಗಿರುತ್ತಾರೆ. ಇಂತಹ ಎರಡೂ ರೀತಿಯ ಮಕ್ಕಳನ್ನು ಅಂಗನವಾಡಿ ಕಾರ್ಯಕರ್ತೆಯರು ಪ್ರೀತಿಯಿಂದ ಮತ್ತು ಹೆತ್ತವರಂತೆ ನೋಡಿಕೊಂಡಾಗ ಸಮಾಜದ ಆಸ್ತಿಯಾಗಿ ಬೆಳೆಯಲು ಸಾಧ್ಯವಿದೆ ಎಂದರು.
ಪುರಸಭಾ ಸದಸ್ಯೆ ಶ್ವೇತಾ ಕುಮಾರಿ ಅಧ್ಯಕ್ಷತೆಯನ್ನು ವಹಿಸಿದ್ದರು. ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಅನಿತಾಲಕ್ಷ್ಮೀ, ಡಿಜೆ.ವಿವಿ ಸಂಘದ ಸಂಚಾಲಕ ಕೆ.ಹೇಮರಾಜ್, ಅಭಿಜಿತ್ ಎಂ, ಹಾಗೂ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *