Header Ads
Header Ads
Breaking News

ಮೂಡುಬಿದರೆಯ ಸುಭಾಷ್‌ನಗರ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

ಮೂಡುಬಿದಿರೆಯ ಸುಭಾಷ್‌ನಗರ ಪುಚ್ಚೇರಿಕಟ್ಟೆಯ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳವಾರ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಪುರಸಭಾ ಸದಸ್ಯ ರತ್ನಾಕರ ದೇವಾಡಿಗ ಪುಸ್ತಕಗಳನ್ನು ವಿತರಿಸಿ ಮಾತನಾಡಿ ಮಕ್ಕಳಿಗೆ ಉತ್ತಮ ಆರೋಗ್ಯ, ಶಿಸ್ತು, ಶಿಕ್ಷಣ ಮಾತ್ರ ಜೀವನಕ್ಕೆ ಸ್ಪೂರ್ತಿಯಾಗುತ್ತದೆ. ಈ ನಿಟ್ಟಿನಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಬೇಕಾದುದು ಊರಿನ ಜನರ ಕರ್ತವ್ಯ ಎಂದು ಹೇಳಿದರು. ಗೋಪಾಲ್ ಶೆಟ್ಟಿಗಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ವಿಶ್ವನಾಥ ಸಫಳಿಗ, ಪುಚ್ಚೇರಿಕಟ್ಟೆ ಅಂಗನವಾಡಿ ಶಿಕ್ಷಕಿ ವಿಜಯಾ ಉಪಸ್ಥಿತರಿದ್ದರು.

 

Related posts

Leave a Reply