Header Ads
Header Ads
Header Ads
Breaking News

ಮೂಡುಬಿದರೆಯ ಸ್ವರಾಜ್ಯ ಮೈದಾನದಲ್ಲಿ ಇಂದಿನಿಂದ ಅಂತರ್ ವಿವಿ ಅಥ್ಲೆಟಿಕ್ ಚಾಂಪಿಯನ್‍ಶಿಪ್

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ಮೂಡುಬಿದರೆಯ ಆಳ್ವಾಸ್ ಶಿಕ್ಷನ ಪ್ರತಿಷ್ಠಾನದ ಸಹಯೋಗದಲ್ಲಿ ದಿಲ್ಲಿಯ ಅಸೋಸಿಯೇಶನ್ ಆಫ್ ಇಂಡಿಯನ್ ಯುನಿವರ್ಸಿಟಿ ಸಹಭಾಗಿತ್ವದಲ್ಲಿ 80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಆಥ್ಲೆಟಿಕ್ ಚಾಂಪಿಯನ್ ಶಿಪ್ ಇಂದಿನಿಂದ ಆರಂಭವಾಗಿದೆ.

ಮೂಡುಬಿದರೆಯ ಸ್ವರಾಜ್ಯ ಮೈದಾನದಲ್ಲಿ 80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ಇಂದಿನಿಂದ ನಡೆಯಲಿದೆ. ಇಂದು ಸಂಜೆ 5045ಕ್ಕೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಉದ್ಘಾಟಿಸಲಿದ್ದಾರೆ. ಡಿಸಿಎಂ. ಆಶ್ವಥ್ ನಾರಾಯಣ ಹಾಗೂ ಸಚಿವರು, ಸಂಸದರು, ಶಾಸಕರು ಭಾಗವಹಿಸಲಿದ್ದಾರೆ. ರಾಜೀವ್ ಗಾಂಧಿ ವಿಶ್ವವಿದ್ಯಾಲಯ 2013, 2015ರ ಬಳಿಕ ಇದೀಗ ಮೂರನೇ ಬಾರಿಗೆ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಆಯೋಜಿಸುತ್ತಿದೆ. ಪ್ರಥಮ ಬಾರಿಗೆ 300ಕ್ಕಿಂತ ಹೆಚ್ಚು ವಿವಿಗಳಿಂದ 4,496 ಅಥ್ಲೀಟ್‍ಗಳು ಭಾಗವಹಿಸುತ್ತಿದ್ದಾರೆ. ಪುರುಷರಿಗೆ 23 ವಿಭಾಗಗಳಲ್ಲಿ ಮತ್ತು ಮಹಿಳೆಯರಿಗೆ 23 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ.

Related posts

Leave a Reply

Your email address will not be published. Required fields are marked *