Header Ads
Header Ads
Breaking News

ಮೂಡುಬಿದಿರೆ:‘ಡೆನ್ನಾನ ಡೆನ್ನನ 2019’ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯ ಹಾಗೂ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ‘ ಡೆನ್ನಾನ ಡೆನ್ನನ 2019’ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ನಾವೆಲ್ಲರೂ ಒಂದೇ ತಾಯಿಯ ಮಕ್ಕಳು, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವವನ್ನು ಸಾರಿದ ಶ್ರೀ ನಾರಾಯಣ ಗುರು ಇಡಿಯ ಮನುಕುಲಕ್ಕೆ ಗುರುಗಳಾಗಿದ್ದಾರೆ. ಮನುಕುಲದ ಮೇಲೆ ವಿಶ್ವಾಸವಿಟ್ಟವರಿಗೆ ನಾರಾಯಣ ಗುರುವೇ ಆದರ್ಶ ಎಂದು ಹೇಳಿದರು.ಮುಖ್ಯ ಅತಿಥಿಯಾಗಿದ್ದ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಪ್ರತಿಭೆ ಹುಟ್ಟಿನಿಂದ ಬರುವಂತದ್ದು. ಆ ಪ್ರತಿಭೆಯನ್ನು ಸಮಾಜದಲ್ಲಿ ಅರಳಿಸುವ ಉತ್ತೇಜನಬೇಕು ಎಂದರು.

ಅಖಿಲ ಭಾರತ ಬಿಲ್ಲವ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ ನಡುಬೈಲು, ಮೂಡುಬಿದಿರೆ ಘಟಕದ ಅಧ್ಯಕ್ಷ ರಾಜೇಶ್ ಡಿ.ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕುದ್ರೋಳಿ ಶ್ರೀಗೋಕರ್ಣನಾಥೇಶ್ವರ ದೇವಳದ ಅಧ್ಯಕ್ಷ ಎಚ್.ಎಸ್ ಸಾಯಿರಾಮ್ ಉಪಸ್ಥಿತರಿದ್ದರು.

Related posts

Leave a Reply