Header Ads
Header Ads
Breaking News

ಮೂಡುಬಿದಿರೆಯಲ್ಲಿ ಕ್ರೀಡಾ ದಿನಾಚರಣೆ. ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ್ ಕ್ರೀಡಾಳುಗಳಿಗೆ ಪ್ರೇರಕ ಶಕ್ತಿ. ರೋಟರಿ ವಿದ್ಯಾಸಂಸ್ಥೆಯ ಪ್ರಾಚಾರ್ಯ ವಿನ್ಸೆಂಟ್ ಡಿಕೋಸ್ತ ಅಭಿಪ್ರಾಯ.

ಮೂಡುಬಿದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಆಶ್ರಯದಲ್ಲಿ ರೋಟರಿ ವಿದ್ಯಾಸಂಸ್ಥೆಯ ಸಮ್ಮಿಲನ್ ಹಾಲ್‌ನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ರೋಟರಿ ವಿದ್ಯಾಸಂಸ್ಥೆಯ ಪ್ರಾಚಾರ್ಯ ವಿನ್ಸೆಂಟ್ ಡಿ’ಕೋಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ಭಾರತದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ್ ಅವರು ಭಾರತದ ಕ್ರೀಡಾಳುಗಳಿಗೆ ಪ್ರೇರಕ ಶಕ್ತಿ. ಅವರ ಸಾಧನೆಗಳ ಬೆಳಕಿನಲ್ಲಿ ಕ್ರೀಡಾಳುಗಳು ಹೆಜ್ಜೆ ಹಾಕಬೇಕಾಗಿದೆ. ಕ್ರೀಡಾರಂಗದಲ್ಲಿ ನಿತ್ಯಸ್ಮರಣೀಯರಾದ ಧ್ಯಾನ್‌ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾದಿನವನ್ನಾಗಿ ಆಚರಿಸಲಾಗುತ್ತಿದೆ’ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ಎಂ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಶಿಕ್ಷಣದ ಪರಿಪೂರ್ಣತೆಗೆ ಕ್ರೀಡೆ ಅಗತ್ಯ ಎಂದು ಹೇಳಿದ ಅವರು ಶಿಕ್ಷಣದಲ್ಲಿ ದೈಹಿಕ ಶಿಕ್ಷಣ ಮತ್ತು ಕ್ರೀಡೆಗಳ ಮಹತ್ವದ ಬಗ್ಗೆ ತಿಳಿಸಿದರು. ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ್ ಜೈನ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಕೋಶಾಧಿಕಾರಿ ಗೋವರ್ಧನ್ ಉಪಸ್ಥಿತರಿದ್ದರು.

Related posts

Leave a Reply