Header Ads
Header Ads
Header Ads
Breaking News

ಮೂಡುಬಿದಿರೆಯಲ್ಲಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಸೆ.೪ರಿಂದ ೬ರ ವರೆಗೆ ನಡೆಯಲಿರುವ ಸ್ಪರ್ಧೆ ಮೂಡಬಿದರೆ ಸ್ವರಾಜ್ಯ ಮೈದಾನದಲ್ಲಿ ಚಾಲನೆ

 
ಮೂಡುಬಿದಿರೆ : ಕರ್ನಾಟಕ ಅಥ್ಲೆಟಿಕ್ಸ್ ಅಸೋಇಯೇಶನ್ ಹಾಗೂ ಆಳ್ವಾಸ್ ಪ್ರತಿಷ್ಠಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ.೪-೬ರವರೆಗೆ ಮೂರು ದಿನಗಳ ಕಾಲ ನಡೆಯುವ ರಾಜ್ಯ ಮಟ್ಟದ ಜ್ಯೂನಿಯರ್ ಮತ್ತು ಸೀನಿಯರ್ ವಿಭಾಗದ ಅಥ್ಲೆಟಿಕ್ಸ್ ಚಾಂಪಿಯನ್ ಶಿಫ್ ಮೂಡುಬಿದಿರೆಯ ಸ್ವರಾಜ್ಯ ಮೈದಾನದ ಸಿಂಥೆಟಿಕ್ ಟ್ರ್ಯಾಕ್‌ನಲ್ಲಿ ಸೋಮವಾರ ಆರಂಭಗೊಂಡಿತು. 

ಈ ಕ್ರೀಡಾಕೂಟದಲ್ಲಿ ಬಾಲಕ ಹಾಗೂ ಬಾಲಕಿಯರ ೧೪, ೧೬, ೧೮ ಮತ್ತು ೨೦ ವಯೋಮಿತಿ ಹಾಗೂ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಕ್ರೀಡಾ ಕ್ಲಬ್, ರೈಲ್ವೇ, ಕ್ರೀಡಾ ಶಾಲೆಗಳು, ಬೆಂಗಳೂರಿನ ಎಂ.ಐ.ಜಿ, ಏರ್‌ಪೋಸ್ ಹಾಗೂ ಅರಣ್ಯ ಇಲಾಖೆ ತಂಡಗಳು ಈ ಕೂಟದಲ್ಲಿ ಭಾಗವಹಿಸಲಿವೆ. ಜ್ಯೂನಿಯರ್‌ನ ೮ ಹಾಗೂ ಸೀನಿಯರ್‌ನ ೨ ಹೀಗೆ ಒಟ್ಟು ೧೦ ವಿಭಾಗದ ತಂಡ ಪ್ರಶಸ್ತಿ ಹಾಗೂ ಸಮಗ್ರ ಚಾಂಪಿಯನ್‌ಶಿಪ್‌ಗಾಗಿ ರಾಜ್ಯದ ಸುಮಾರು ೨,೦೦೦ ಮಂದಿ ಕ್ರೀಡಾಪಟುಗಳು ಭಾಗವಹಿಸಲಿದ್ದು, ಸುಮಾರು ೫೦೦ ಮಂದಿ ಕ್ರೀಢಾಧಿಕಾರಿಗಳು ಸಹಕರಿಸಲಿದ್ದಾರೆ. ಈ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ತೋರುವ ನಿರ್ವಹಣೆಯ ಆಧಾರದ ಮೇಲೆ ದಕ್ಷಿಣ ವಲಯ ಜ್ಯೂನಿಯರ್ ಕ್ರೀಡಾಕೂಟ, ರಾಷ್ಟ್ರೀಯ ಜ್ಯೂನಿಯರ್ ಕ್ರೀಡಾಕೂಟ ಹಾಗೂ ಮುಕ್ತ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟಗಳಿಗೆ ಆಯ್ಕೆಯನ್ನು ನಡೆಸಲಾಗುತ್ತದೆ.

ಮಾಜಿ ಸಚಿವ, ಶಾಸಕ ಕೆ. ಅಭಯಚಂದ್ರ ಜೈನ್ ಅವರು ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿ ರಾಜ್ಯಕ್ಕೆ ಮಾದರಿಯಾಗಿರುವ ಸಿಂಥೆಟಿಕ್ ಟ್ರ್ಯಾಕ್ ಮೂಡುಬಿದಿರೆಯಲ್ಲಿ ಆಗಿರುವುದರಿಂದ ಆಳ್ವಾಸ್ ಸಹಿತ ಇತರ ಕ್ರೀಡಾಪಟುಗಳಿಗೆ ಸಹಕಾರಿಯಾಗಿದೆ. ಇಂತಹ ಉತ್ತಮ ಟ್ರ್ಯಾಕ್ ನಿರ್ಮಾಣಕ್ಕೆ ಸಹಕರಿಸಿರುವ ದಿವಂಗತ ವಿಎಸ್ ಆಚಾರ್ಯ ಅವರನ್ನು ಸ್ಮರಿಸಿಕೊಂಡರು.

ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪುರಸಭಾ ಉಪಾಧ್ಯಕ್ಷ ವಿನೋದ್ ಸೆರಾವೋ ಮತ್ತಿತರರಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ/ಎಂ.ಮೋಹನ ಆಳ್ವ ಸ್ವಾಗತಿಸಿದರು.

Related posts

Leave a Reply