Header Ads
Header Ads
Breaking News

ಮೂಡುಬಿದಿರೆಯಲ್ಲಿ 24 ನೇ ಆಳ್ವಾಸ್ ವಿರಾಸತ್ ಜ.24 ರಿಂದ 14 ರವರೆಗೆ ಆಳ್ವಾಸ್ ಆವರಣದಲ್ಲಿ ವಿರಾಸತ್

 

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ ತನ್ನ 24 ನೇ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಈ ವರ್ಷದ ‘ಆಳ್ವಾಸ್ ವಿರಾಸತ್’ ಜನವರಿ 12 ರಿಂದ 14 ರವರೆಗೆ ಮೂಡುಬಿದಿರೆಯ ಪುತ್ತಿಗೆಯ ವಿವೇಕಾನಂದ ನಗರದ ಆಳ್ವಾಸ್ ಆವರಣದಲ್ಲಿ ನಡೆಯಲಿವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಹೇಳಿದರು.

ಮಂಗಳೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 40,000 ಕ್ಕಿಂತ ಅಽಕ ಪ್ರೇಕ್ಷಕರು ಕುಳಿತು ನೋಡಬಹುದಾದ ಆಸನಗಳ ವ್ಯವಸ್ಥೆ ಇರುವ ವಿಶಾಲ ಪ್ರದೇಶ ಇದಕ್ಕೆ ಸಜ್ಜಾಗಿದ್ದು, ಜನವರಿ 12 ರಂದು ಸಾಂಸ್ಕೃತಿಕ ಮೆರವಣಿಗೆಯ ಮೂಲಕ ಉದ್ಘಾಟನಾ ಸಮಾರಂಭವು ತೆರೆದುಕೊಳ್ಳುತ್ತವೆ. ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ವಿರಾಸತ್ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ಪದ್ಮಭೂಷಣ ರಾರ್ಜ ಡಾ.ಡಿ.ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಕೆ.ಅಭಯಚಂದ್ರ ಜೈನ್, ಮಾಜಿ ಶಾಸಕ ಕೆ. ಅಮರನಾಥ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಜಿಲ್ಲಾಽಕಾರಿ ಸಸಿಕಾಂತ ಸೆಂಥಿಲ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಮುಂದುವರಿದು ಮಾತನಾಡಿದ ಅವರು, ಪದ್ಮಭೂಷಣ ಪಂಡಿತ್ ರಾಜನ್‌ಸಾಜನ್ ಮಿಶ್ರಾ ಸಹೋದರರಿಗೆ ‘ಆಳ್ವಾಸ್ ವಿರಾಸತ್ 2018’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಶೋಭಾ ಬ್ರೂಟಾ ಅವರಿಗೆ ಆಳ್ವಾಸ್ ವರ್ಣವಿರಾಸತ್ ಪ್ರಶಸ್ತಿ ನೀಡಿ ಗೌರಸಲಾಗುವುದು. ಜನವರಿ 12 ರಂದು ಹಿಂದಿ ಚಿತ್ರರಂಗದ ಪ್ರಸಿದ್ಧ ಹಿನ್ನೆಲೆ ಗಾಯಕರಾದ ಕೆ.ಕೆ.ಮತ್ತು ತಂಡದಿಂದ ಸಂಗೀತ ರಸಸಂಜೆ ನಡೆಯಲಿದೆ. ಜ.13 ರಂದು ಬಹುಭಾಷಾ ಹಿನ್ನೆಲೆ ಗಾಯಕ, ಸಂಗೀತ ನಿರ್ದೇಶಕ ಶಂಕರ ಮಹದೇವನ್-ಎಹ್ಸಾನ್-ಲೋಯ್ ಮತ್ತು ಸಿದ್ಧಾರ್ಥ ಮಹದೇವನ್ ತಂಡವು ‘ಸುಮಧುರ ಸಂಗೀತ’ದ ಮೂಲಕ ಜನಮನಸೂರೆಗೊಳ್ಳಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಕನ್ನಡ ವಿಭಾಗದ ಮುಖ್ಯಸ್ಥ ವೇಣುಗೋಪಾಲ ಶೆಟ್ಟಿ ಉಪಸ್ಥಿತರಿದ್ದರು.

Related posts