Header Ads
Breaking News

ಮೂಡುಬಿದಿರೆಯ ಪೇಟೆಯಲ್ಲಿ ಕೋವಿಡ್ 19- ಜನಾಂದೋಲನ ಜಾಥಾ ಕಾರ್ಯಕ್ರಮ

ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೂಡುಬಿದಿರೆ ಪುರಸಭೆ ಮತ್ತು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಕೋವಿಡ್ 19- ಜನಾಂದೋಲನ ಜಾಥಾ ಕಾರ್ಯಕ್ರಮವು ಮೂಡುಬಿದಿರೆಯ ಪೇಟೆಯಲ್ಲಿ ನಡೆಯಿತು.

ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಜಾಥಾವನ್ನು ಉದ್ದೇಶಿಸಿ ಮಾತನಾಡಿ ಕೊರೋನಾ ವೈರಸ್ ಬಗ್ಗೆ ಭಯ ಬೇಡಾ ಆದರೆ ಎಚ್ಚರವಿರಲಿ. ಜನರೆಲ್ಲರೂ ತಮ್ಮ ತಮ್ಮ ಆರೋಗ್ಯದ ದೃಷ್ಠಿಯಿಂದ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ. ನಾಳೆಯಿಂದ (ಇಂದಿನಿಂದ) ಪುರಸಭಾ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ ಪುರಸಭೆಯು ಪೊಲೀಸ್ ಅದಿಕಾರಿಗಳ ಮೂಲಕ 100 ದಂಡವನ್ನು ಹಾಕಲಾಗುವುದು ಎಂದು ಎಚ್ಚರಿಸಿದರು.

ಪುರಸಭಾ ಉಪಾಧ್ಯಕ್ಷೆ ಸುಜಾರ ಶಶಿಕಿರಣ್, ಸದಸ್ಯರಾದ ಸ್ವಾತಿ ಪ್ರಭು, ಸೌಮ್ಯ ಸಂದೀಪ್ ಶೆಟ್ಟಿ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಸಿಬಂದಿ ಸುದೀಶ್ ಹೆಗ್ಡೆ, ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ಸಹಾಯಕ ಕುಮಾರ್, ಮತ್ತಿತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.

Related posts

Leave a Reply

Your email address will not be published. Required fields are marked *