Header Ads
Breaking News

ಮೂಡುಬಿದಿರೆ : ಅಖಿಲ ಭಾರತ ಅಂತರ್ ವಿವಿ ಅಥ್ಲೆಟಿಕ್ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಮತ್ತು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ 5 ದಿನಗಳ ಕಾಲ ನಡೆಯುವ 80ನೇ ಅಖಿಲ ಭಾರತ ಅಂತರ್ ವಿವಿ ಅಥ್ಲೆಟಿಕ್ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕೇಂದ್ರ ಯುವಜನ ಸೇವೆ ಮತ್ತು ಸಬಲೀಕರಣದ ಸಚಿವ ಕಿರೆಣ್ ರಿಜಿಜು ಅವರು ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬ ವ್ಯಕ್ತಿಗೂ ತನ್ನ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ. ಕ್ರೀಡೆಯನ್ನು ತಾತ್ಸಾರ ಮನೋಭಾವದಿಂದ ನೋಡುವ ದೃಷ್ಠಿಕೋನ ಬದಲಾಗಬೇಕು. ಕ್ರೀಡೆ ಹೆಚ್ಚುವರಿ ಸಂಸ್ಕøತಿ ಅಲ್ಲ ಅದಕ್ಕೂ ಶಿಕ್ಷಣ ಎಂಬ ನೀತಿ ತಂದಿದ್ದೇವೆ. ನಾವು ಆರೋಗ್ಯವಂತ ಭಾರತವನ್ನು ನಿರ್ಮಿಸಲು ನಾವೆಲ್ಲರೂ ಜೀವನದಲ್ಲಿ ಕ್ರೀಡಾ ಸಂಸ್ಕøತಿಯನ್ನು ಬೆಳೆಸಿಕೊಳ್ಳಬೇಕು ಅಂತ ಹೇಳಿದ್ರು.

ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಡಾ.ಎಸ್ ಸಚ್ಚಿದಾನಂದ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ರಾಜ್ಯ ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ ರವಿ, ಶಾಸಕ ಉಮಾನಾಥ ಕೋಟ್ಯಾನ್,ಮಾಜಿ ಸಚಿವ ಅಭಯಚಂದ್ರ ಜೈನ್, ಅಮರನಾಥ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ”ಸೋಜಾ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಜಂಟಿ ಕಾರ್ಯದರ್ಶಿ ಡಾ ಬಲ್ಜೀತ್ ಸಿಂಗ್ ಸೋಖನ್, ಸ್ಪೋಟ್ರ್ಸ ಆಥಾರಿಟಿ ಆಫ್ ಇಂಡಿಯಾದ ಡೈರೆಕ್ಟರ್ ಜನರಲ್ ಸಂದೀಪ್ ಪ್ರಧಾನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ/ಎಂ.ಮೋಹನ ಆಳ್ವ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *