Header Ads
Header Ads
Breaking News

ಮೂಡುಬಿದಿರೆ: ಅದರ್ಶ ಸಂಸ್ಥೆಯಿಂದ ವಿಶ್ವಮಹಿಳಾ ದಿನಾಚರಣೆ, ವಾರ್ಷಿಕೋತ್ಸವ

ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ, ಗ್ರಾಮಜ್ಯೋತಿ ಉಳಿತಾಯ ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ನವಚೇತನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಗಳ 19ನೇ ವಾರ್ಷಿಕೋತ್ಸವ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮೂಡುಬಿದಿರೆಯ ಪದ್ಮಾವತಿ ಕಲಾಮಂದಿರದಲ್ಲಿ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಮಾತನಾಡಿ, ಮಹಿಳೆಯರ ಶಿಕ್ಷಣದ ಪ್ರಭಾವದಿಂದ ಬಹುಪತ್ನಿತ್ವದ ವ್ಯವಸ್ಥೆಗಳು ಕಡಿಮೆಯಾಗಿದೆ. ಸ್ವಸಹಾಯ ಸಂಘಗಳಲ್ಲಿ ಮಹಿಳೆಯರು ಗುರುತಿಸಿಕೊಂಡ ಕಾರಣ ಕುಟುಂಬಕ್ಕೆ ಆರ್ಥಿಕಬಲ ಸಿಕ್ಕಿದೆ. ಮೀಸಲಾತಿಯಿಂದ ರಾಜಕೀಯ ಕ್ಷೇತ್ರ ಹಾಗೂ ಉದ್ಯೋಗದಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿದೆ ಎಂದರು.

ಸಂಸ್ಥೆಯ ಉಪಾಧ್ಯಕ್ಷ ಹಸ್ದುಲ್ಲಾ ಇಸ್ಮಾಯಿಲ್ ಸಮಾರಂಭವನ್ನು ಉದ್ಘಾಟಿಸಿದರು. ನಿರ್ದೇಶಕ ಜೇಕಬ್ ವರ್ಗೀಸ್ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭ ಸ್ವಸಹಾಯ ಗುಂಪುಗಳ ಸದಸ್ಯರ ಕುಟುಂಬದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ, 18ವರ್ಷಗಳಲ್ಲಿ ಸ್ವಸಹಾಯ ಗುಂಪಿನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ 42 ಮಂದಿ ಹಿರಿಯ ಸದಸ್ಯರನ್ನು ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್, ಸೌಹಾರ್ದ ಸಹಕಾರಿಯ ಅಧ್ಯಕ್ಷೆ ಶ್ರೀಲತಾ, ನಿರ್ದೇಶಕ ಇಮ್ಯಾನುವೆಲ್ ಮೋನಿಸ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *