Header Ads
Header Ads
Breaking News

ಮೂಡುಬಿದಿರೆ: ನ.2 ಮತ್ತು 3ರಂದು ರಾಜ್ಯಮಟ್ಟದ ಬಾಲ್‍ಬ್ಯಾಡ್ಮಿಂಟನ್ ಪಂದ್ಯಾಟ

ಮೂಡುಬಿದಿರೆ : ದ.ಕ. ಜಿ.ಪಂ. ಶಿಕ್ಷಣ ಇಲಾಖೆ, ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಅಳಿಯೂರು ಸರಕಾರಿ ಪ್ರೌಢಶಾಲೆ ಇವುಗಳ ಸಹಯೋಗದಲ್ಲಿ ನ.2 ಮತ್ತು 3ರಂದು ಅಳಿಯೂರು ಸರಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ, ಬಾಲಕಿಯರ ಬಾಲ್‍ಬ್ಯಾಡ್ಮಿಂಟನ್ ಪಂದ್ಯಾಟ ಏರ್ಪಡಿಸಲಾಗಿದೆ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ತಿಳಿಸಿದರು.

ಅವರು ಮೂಡುಬಿದರೆಯಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಅಪರಾಹ್ನ 2 ಗಂಟೆಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಪಂದ್ಯಾಟವನ್ನು ಉದ್ಘಾಟಿಸಲಿದ್ದಾರೆ.ನ.3ರಂದು ಅಪರಾಹ್ನ 3 ಗಂಟೆಗೆ ಸಮಾರೋಪ ಸಮಾರಂಭವು ನಡೆಯಲಿದ್ದು ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ ಎಂದು ಹೇಳಿದರು.ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ಅಳಿಯೂರು ಸರಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ವಸಂತ ಜೋಗಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಬಿ. ಅಳಿಯೂರು ಉಪಸ್ಥಿತರಿದ್ದರು.

Related posts

Leave a Reply