Header Ads
Breaking News

ಮೂಡುಬಿದಿರೆ ಪುರಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ: ಶಾಸಕ ಉಮಾನಾಥ ಕೋಟ್ಯಾನ್ ಮನವಿ

ಮೂಡುಬಿದಿರೆ : ಭ್ರಷ್ಟಾಚಾರ ಮುಕ್ತ ಸುಂದರ ಮೂಡುಬಿದಿರೆಯನ್ನು ರೂಪಿಸುವ ಗುರಿಯನ್ನು ಬಿಜೆಪಿ ಹೊಂದಿದ್ದು ಇದನ್ನು ಸಾಕಾರಗೊಳಿಸಲು ಮೇ 29ರಂದು ನಡೆಯುವ ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಅವರು ಮೂಡುಬಿದಿರೆ ಪುರಸಭೆಯ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಳೆದ ಮೂವತ್ತು ವರ್ಷಗಳಿಂದ ಪುರಸಭೆಯಲ್ಲಿ ಅಧಿಕಾರವನ್ನು ನಡೆಸುತ್ತಾ ಬಂದಿರುವ ಕಾಂಗ್ರೆಸ್ ಭ್ರಷ್ಠಾಚಾರಕ್ಕೆ ಅವಕಾಶವನ್ನು ನೀಡುತ್ತಾ ಬರುವ ಮೂಲಕ ತ್ಯಾಜ್ಯ ವಿಲೇವಾರಿ ಹೆಸರಲ್ಲಿ ಲಕ್ಷಲಕ್ಷ ಲೂಟಿಗೈಯ್ಯಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವಾರು ಯೋಜನೆಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸದೆ ಸ್ವೇಚ್ಛೆಯಾಗಿ ನಡೆಸಲಾಗಿದೆ ಎಂದು  ತಿಳಿಸಿದ್ರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಪಿ ಜಗದೀಶ ಅಧಿಕಾರಿ, ಪ್ರಧಾನ ಕಾರ್‍ಯದರ್ಶಿ ಸುದರ್ಶನ ಎಂ, ಮುಖಂಡರುಗಳಾದ ಬೃಜೇಶ್ ಚೌಟ, ಮೇಘನಾಥ ಶೆಟ್ಟಿ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಅಧ್ಯಕ್ಷ ಜೋಯ್ಲಸ್ ಡಿ’ಸೋಜ, ಹರೀಶ್ ಎಂ.ಕೆ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *