Header Ads
Header Ads
Header Ads
Breaking News

ಮೂಡುಬಿದಿರೆ ವಲಯಮಟ್ಟದ ಕ್ರೀಡಾಕೂಟ ಸ್ವರಾಜ್ಯ ಮೈದಾನದಲ್ಲಿ ಕ್ರೀಡಾಕೂಟಕ್ಕೆ ಚಾಲನೆ ಕ್ರೀಡಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಅಪಾರ ಕೊಡುಗೆ ನೀಡಿದೆ ಶಾಸಕ ಅಭಯಚಂದ್ರ ಜೈನ್ ಹೇಳಿಕೆ

ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಹಾಗೂ ಮುಡುಬಿದಿರೆ ರೋಟರಿ ಅಂಗ್ಲ ಮಾಧ್ಯಮ ಶಾಲೆ ಜಂಟಿ ಆಶ್ರಯದಲ್ಲಿ ಎರಡು ದಿನಗಳು ನಡೆಯುವ ಮೂಡುಬಿದಿರೆ ವಲಯ ಮಟ್ಟದ ಪ್ರಾಥಮಿಕ ಹಾಗು ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಸ್ವರಾಜ್ಯ ಮೈದಾನದಲ್ಲಿ ಚಾಲನೆ ನೀಡಲಾಯಿತು.

ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಕ್ರೀಡಾ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ರಾಜ್ಯ ಸರ್ಕಾರ ನೀಡಿದೆ. ಸರ್ಕಾರಿ ಶಾಲೆಯ ಕ್ರೀಡಾಪಟುಗಳು ಕೂಡ ಶೂ ಧರಿಸಿ ಕ್ರೀಡಾಂಗಣಕ್ಕೆ ಬರಬೇಕು. ಶೂ ಖರೀದಸಲು ಬೇಕಾದ ಹಣವನ್ನು ಶಾಸಕನ ನೆಲೆಯಲ್ಲಿ ಒದಗಿಸಲಾಗವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯರಾದ ಸುಜಾತ, ಕೆ.ಪಿ ಸುಚರಿತ ಶೆಟ್ಟಿ, ಮಾಜಿ ಸಚಿವ, ರೋಟರಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಕೆ.ಅಮರನಾಥ ಶೆಟ್ಟಿ, ಕಾರ್ಯದರ್ಶಿ ನಾರಾಯಣ ಪಿ.ಎಂ, ಸಂಚಾಲಕ ಡಾ.ಯತಿಕುಮಾರ್ ಸ್ವಾಮೀ ಗೌಡ, ನಾಗೇಶ್ ಸಹಿತ ಗಣ್ಯರು ಪಾಲ್ಗೊಂಡರು.

Related posts

Leave a Reply