Header Ads
Header Ads
Breaking News

ಮೂಡುಬಿದಿರೆ ವಿದ್ಯಾಗಿರಿಯಲ್ಲಿ ನಡೆಯುವ ಆಳ್ವಾಸ್ ನುಡಿಸಿರಿ – 2018ಗೆ ಅದ್ಧೂರಿ ಚಾಲನೆ

ಸಮ್ಮೇಳನಕ್ಕೆ ಮುನ್ನ ಆಳ್ವಾಸ್ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬರೋಡ ಶಶಿಧರ್ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಮತ್ತಿತರ ಗಣ್ಯರು ಆಳ್ವಾಸ್ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಿದರು. ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ಗ್. ರಾಜೇಂದ್ರಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.ಬಳಿಕ ರತ್ನಾಕರ ವರ್ಣಿ ವೇದಿಕೆಯ ಸಂತ ಶಿಶುನಾಳ ಶರೀಫ ಸಭಾಂಗಣದಲ್ಲಿ ನುಡಿಸಿರಿ ಸಮ್ಮೇಳನವನ್ನು ಉದ್ಘಾಟಿಸಲಾಯಿತು. ಸಮ್ಮೇಳನಾಧ್ಯಕ್ಷೆ ಡಾ. ಮಲ್ಲಿಕಾ ಎಸ್. ಘಂಟಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನವನ್ನು ಖ್ಯಾತ ಸಂಶೋಧಕ ಡಾ. ಷ ಶೆಟ್ಟರ್ ಅವರು ಸಮ್ಮೇಳನವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಆಳ್ವಾಸ್ ನುಡಿಸಿರಿಯ ವೈಭವವನ್ನು ವರ್ಣಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅವರು ಪ್ರಸ್ತಾವನೆಗೈದು, ಅತಿಥಿಗಳನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಆಳ್ವಾಸ್ ನುಡಿಸಿರಿ2017ರ ನೆನಪಿನ ಸಂಚಿಕೆ ‘ಕರ್ನಾಟಕ ಬಹುತ್ವದ ನೆಲೆಗಳು’ ಕೃತಿಯನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಮುಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಅಮರನಾಥ್ ಶೆಟ್ಟಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಶಶಿ ಕ್ಯಾಟರರ್ಸ್ ಬರೋಡ ಮಾಲಕ ಶಶಿಧರ್ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ರು.

Related posts

Leave a Reply